ಬೆಂಗಳೂರು : ರಾಜ್ಯದಲ್ಲಿ ಕೆಪಿಎಸ್ ಶಾಲೆಗಳ ಗುಣಮಟ್ಟ ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಶೀಘ್ರದಲ್ಲೇ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಕೆಪಿಎಸ್ (KPS) ಶಾಲೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ, ಆಹಾರ ಸಂಗೀತ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕಲಾ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಮಹತ್ವದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರು ಶಿವಮೊಗ್ಗದಿಂದಲೇ ಅಧಿಕೃತ ಚಾಲನೆ ನೀಡಲಿದ್ದಾರೆ ಎಂಬುದನ್ನೂ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
1995ರಿಂದ ಹತ್ತು ವರ್ಷಗಳ ಕಾಲ ಅನುದಾನವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಬಲವರ್ಧನೆ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಈ ಕುರಿತು ಫೆಬ್ರವರಿ 2ರಂದು ಬಜೆಟ್ ಪೂರ್ವ ಸಭೆಯನ್ನು ಕರೆಯಲಾಗಿದೆ ಎಂದು ಅವರು ಹೇಳಿದರು.








