ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ಅಗ್ನಿ ಅವಘಡ ಸಂಭವಿಸಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ಕೂದಲೆಳೆಯ ಅಂತರದಲ್ಲಿ ಪ್ರಯಾಣಿಕರು ಪ್ರಣಾಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಖಾಸಗಿ ಬಸ್ ವೊಂದರಲ್ಲಿ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಸಿಗಂದೂರಿನಿಂದ ಸಾಗರದ ಕಡೆಗೆ ಸಾಗುತ್ತಿದ್ದಂತ ಎಸ್ ಬಿ ಕೆ ಎನ್ನುವಂತ ಖಾಸಗಿ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಘಟನೆ ನಡೆದಿದೆ.
ಇಂದು ಸಂಜೆ ಹುಲಿದೇವರಬನದ ಬಳಿಯಲ್ಲಿ ಖಾಸಗಿ ಬಸ್ ಸಾಗುತ್ತಿದ್ದಂತ ಸಂದರ್ಭದಲ್ಲಿ ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಂಡಿರೋದನ್ನು ಗ್ರಾಮಸ್ಥರು ಗಮನಿಸಿ ಚಾಲಕನಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ ನಿಲ್ಲಿಸಿದ್ದಾರೆ. ಕೂಡಲೇ ಗ್ರಾಮಸ್ಥರು, ಬಸ್ ಸಿಬ್ಬಂದಿಗಳ ಸಹಾಯದಿಂದ ಬಸ್ಸಿನಲ್ಲಿದ್ದಂತ ಅದರಲ್ಲಿದ್ದಂತ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.
ಪ್ರಯಾಣಿಕರು ಬಸ್ಸಿನಿಂದ ಕೆಳಗೆ ಇಳಿದ ಬಳಿಕ ಬೆಂಕಿಯ ಕೆನ್ನಾಲಿಗೆ ಬಸ್ಸಿನ ಕೆಲ ಭಾಗಗಳಿಗೆ ವ್ಯಾಪಿಸಿದೆ ಎನ್ನಲಾಗುತ್ತಿದೆ. ಈ ಖಾಸಗಿ ಬಸ್ ಅಗ್ನಿ ಅವಘಡದಲ್ಲಿ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ಖ್ಯಾತ ನಟ ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್ ಗೆ ಪದ್ಮಭೂಷಣ
ಸ್ವಿಮ್ಮಿಂಗ್ ಪೂಲ್ ನಲ್ಲಿ ಮಹಿಳೆ ಶವವಾಗಿ ಪತ್ತೆ: ಪತಿಯಿಂದಲೇ ಕೊಲೆ ಶಂಕೆ








