ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭಾರಿ ಅನಾಹುತ ಒಂದು ತಪ್ಪಿದ್ದು, ಖಾಸಗಿ ಬಸ್ ಒಂದು ಆಕಸ್ಮಿಕ ಬೆಂಕಿಯಿಂದಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಖಾಸಗಿ ಬಸ್ ನಲ್ಲಿ ಇದ್ದ ಪ್ರಯಾಣಿಕರು ಪಾರಾಗಿರುವ ಘಟನೆ ಸಿಗಂದೂರು ಬಳಿ ಹುಲಿದೇವರ ಬನ ಗ್ರಾಮದ ಬಳಿ ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಕ್ಷೇತ್ರದ ಬಳಿ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಕಂಡು ಹುಲಿದೇವರಬನ ಗ್ರಾಮಸ್ಥರು ಬಸ್ ನಿಲ್ಲಿಸಿದ್ದಾರೆ. ಬಸ್ ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಜನ ನಂದಿಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿ ಇದ್ದ ಎಲ್ಲಾ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.








