ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಒಂದು ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದಂತಹ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ದಂಪತಿಗಳು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೂಗನೋಳ್ಳಿ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಮೃತ ದಂಪತಿಗಳು ಕೊಲ್ಲಾಪುರದ ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವಾಗ ಕೂಗನೋಳ್ಳಿ ಎಂಬಲ್ಲಿ ದಂಪತಿಗಳು ಕಾರು ನಿಲ್ಲಿಸಿದ್ದಾರೆ.
ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಂಟೇನರ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








