ಶಿವಮೊಗ್ಗ: ಇಂದು ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ನಿರ್ಮಿಸಲು ಉದ್ದೇಶಿಸಿರುವಂತ ಶಿಕ್ಷಣ ಸಂಸ್ಥೆ, ಸಭಾ ಮಂಟಪದ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಈ ಕುರಿತು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 26-01-2026ರ ಸೋಮವಾರದ ಇಂದು ಬೆಳಗ್ಗೆ 11 ಗಂಟೆಗೆ ಶ್ರೀ ಮಾರಿಕಾಂಬಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಮಾರಿಕಾಂಬ ಸಭಾಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿದ್ಯುಕ್ತವಾಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದಿದೆ.
ಇಂದಿನ ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನ ಸಮಿತಿಯ ಅಧ್ಯಕ್ಷರಾದಂತ ಕೆ.ಎನ್ ನಾಗೇಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರ ಉಪ ವಿಭಾಗಾಧಿಕಾರಿ ವಿರೇಶ ಕುಮಾರ್, ತಹಶೀಲ್ದಾರ್ ರಶ್ಮಿ, ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಇರಲಿದ್ದಾರೆ ಎಂದಿದೆ.
ಈ ವೇದಿಕೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಉಪಾಧ್ಯಕ್ಷ ಸುಂದರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ್ ರಾವ್, ಸಹ ಕಾರ್ಯದರ್ಶಿ ಎಸ್ ವಿ ಕೃಷ್ಣಮೂರ್ತಿ, ಕೋಶಾಧ್ಯಕ್ಷರಾದಂತ ನಾಗೇಂದ್ರ ಎಸ್ ಕುಮಟ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂಬುದಾಗಿ ತಿಳಿಸಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







