ಬೆಂಗಳೂರು : ಇಂದು ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನಲ್ಲಿ ಇಂದು 77ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಎಂಜಿ ರಸ್ತೆಯ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಇಂದು ಬೆಳಗ್ಗೆ ರಾಜ್ಯಪಾಲರು 9 ಗಂಟೆಗೆ ದ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ಬಳಿಕ ಗೌರವ ರಕ್ಷೆ ಸ್ವೀಕರಿಸಿದ್ದಾರೆ. ಬಳಿಕ ಮಾತನಾಡಿದ ರಾಜ್ಯಪಾಲರು, ರಾಜ್ಯದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು, ಸಾಮಾಜಿಕ, ಆರ್ಥಿಕ, ಕಾನೂನಿಗೆ ಹಲವರು ಶ್ರಮಿಸಿದ್ದಾರೆ. ದೇಶಕ್ಕಾಗಿ ಹಲವರು ಜೀವವನ್ನ ಕೊಟ್ಟಿದ್ದಾರೆ. ಅಂಬೇಡ್ಕರ್ ಅವರಿಂದ ದೇಶದ ಸಂವಿಧಾನಕ್ಕೆ ಕೊಡುಗೆ ನೀಡಿದ್ದಾರೆ.
ಆರ್ಥಿಕ, ಬೌದ್ಧಿಕ ವಿಕಾಸ 2 ಪಟ್ಟು ಹೆಚ್ಚಿಸಲು ರಾಜ್ಯ ಸರ್ಕಾರ ಬದ್ದ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಿಗೆ ಅನುಕೂಲವಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ಹಲವು ನಾಯಕರು ಹೋರಾಟ ಮಾಡಿದ್ದಾರೆ, ಮಹಿಳೆಯರ ಸುರಕ್ಷತೆಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಮನೆ ಇಲ್ಲದ ಬಡವರಿಗೆ ಹಕ್ಕು ಪತ್ರ ಕೊಡುವ ಕೆಲಸ ಮಾಡಲಾಗಿದೆ. ಬೆಂಗಳೂರಿನಲ್ಲಿ 1.5 ಲಕ್ಷ ಕೋಟಿ ರೂ. ಯೋಜನೆ ಜಾರಿಯಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಸಾಕಷ್ಟು ಅಭಿವೃದ್ಧಿ ಆಗಲಿದೆ. ರಾಜ್ಯದ ಅಭಿವೃದ್ಧಿಗೆ ರಾಜ್ಯಸರ್ಕಾರ ಸಾಕಷ್ಟು ಶ್ರಮ ವಹಿಸಿದೆ. ರೈತಾಪಿ ಸಮುದಾಯಗಳ ಹಿತರಕ್ಷಣೆಗೆ ಕೆಲಸ ಮಾಡಲಾಗುತ್ತಿದೆ. 2025-26ನೇ ಬಜೆಟ್ ನಲ್ಲಿ 83,200 ಕೋಟಿ ವೆಚ್ಚ ಆಗುತ್ತಿದೆ ಎಂದರು.
ಮನೆ ಇಲ್ಲದ ಬಡವರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ. ಒಂದು ಲಕ್ಷ ಹಕ್ಕು ಪತ್ರಗಳು ವಿತರಣೆಎ ಸಿದ್ಧವಾಗಿವೆ. ರಾಜ್ಯದಲ್ಲಿ ಸೆಮಿ ಕಂಡಕ್ಟರ್, ಏರೋ ಸ್ಪೇಸ್ ಗೆ ಒತ್ತು ನೀಡಲಾಗಿದೆ. ರಾಜ್ಯದಲ್ಲಿ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರದಿಂದ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.








