ಬೆಂಗಳೂರು : ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ನಡೆದಿದ್ದ ಬೆಳವಣಿಗೆಯ ಬಗ್ಗೆ ರಾಷ್ಟ್ರಪತಿಗೆ ವರದಿ ಸಲ್ಲಿಸಲಾಗಿದೆ. ದ್ರೌಪದಿ ಮುರ್ಮು ಅವರಿಗೆ ಗವರ್ನರ್ ಥಾವರ್ ಚಂದ್ ಗೆಹ್ಲೊಟ್ ವರದಿ ಸಲ್ಲಿಸಿದ್ದಾರೆ.
ವಿಧಾನಸಭೆಯಲ್ಲಿ ನಡೆದಿದ್ದ ಘಟನೆ ಕುರಿತು ಇದೀಗ ರಾಷ್ಟ್ರಪತಿ ಭವನಕ್ಕೆ ವರದಿ ರವಾನಿಸಲಾಗಿದೆ. ವಾಸ್ತವ ಅಂಶಗಳ ಪ್ರತ್ಯೇಕ ವರ್ದಿಸಿದ ಪಡಿಸಿ ರಾಜ್ಯಪಾಲರು ರಾಷ್ಟ್ರಪತಿ ಅವರಿಗೆ ವರದಿ ಸಲ್ಲಿಸಿದ್ದಾರೆ. ರಾಜ್ಯದ ಬೆಳವಣಿ ಬಗ್ಗೆ ವಾರ ಮತ್ತು ತಿಂಗಳಿಗೋಮ್ಮೆ ರಾಷ್ಟ್ರಪತಿಗಳಿಗೆ ವರದಿ ಸಲ್ಲಿಸುತ್ತಾರೆ. ವಾರದ ವರದಿ ಅಲ್ಲದೆ ಪ್ರತ್ಯೇಕ ವರದಿ ಸಲ್ಲಿಸಿದ್ದಾರೆ.
ಸದನದಲ್ಲಿ ರಾಜ್ಯಪಾಲರು ಭಾಷಣ ಮಾಡದೆ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಆನಂತರ ನಡೆದ ಬೆಳವಣಿಗೆಗಳ ಬಗ್ಗೆ ಪ್ರತ್ಯೇಕ ವರ್ದಿ ಸಲ್ಲಿಸಿದ್ದಾರೆ. ವರದಿಯಲ್ಲಿ ರಾಜಪಾಲರ ವಿರುದ್ಧ ಘೋಷಣೆ ಕೂಗಿದರ ಬಗ್ಗೆ, ಭಾಷಣ ಮಾಡಲು ಒತ್ತಡ ಹೇರಲು ಪ್ರಯತ್ನಿಸಿದ ಬಗ್ಗೆ ಹಾಗು ಕಾಂಗ್ರೆಸ್ ಸದಸ್ಯರ ವರ್ತನೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಉಲ್ಲೇಖಿಸಿದ ಮಾತುಗಳ ಬಗ್ಗೆಯೂ ವಿವರಿಸಲಾಗಿದೆ.








