ಕೇರಳ: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದ ಗಡಿಯಲ್ಲಿ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು.
ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
BREAKING: ರಾಜ್ಯದಲ್ಲಿ ಮತ್ತೊಂದು ರಾಬರಿ: ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ
ನಾಳೆ ಕಾಂಗ್ರೆಸ್ ಪಕ್ಷದಿಂದ ಲೋಕಭವನ ಚಲೋ: ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರತಿಭಟನೆ








