ಬೆಂಗಳೂರು : ರಾಜ್ಯದ ರೈತರೇ ಗಮನಿಸಿ, ಕೃಷಿಯನ್ನು ಒಂದು ಲಾಭದಾಯಕ ಹುದ್ದೆಯನ್ನಾಗಿ ಮಾಡುವ ಸರ್ಕಾರದ ಕಾರ್ಯಕ್ರಮಗಳು ಹೀಗಿವೆ.
1. ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣೆ : ಈ ಕಾರ್ಯಕ್ರಮದಡಿ ರೈತರು
ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಹಾಗೂ ಕೃಷಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಒದಗಿಸಲಾಗುವುದು (ಸಾಮಾನ್ಯ ವರ್ಗದ ರೈತರಿಗೆ ಶೇ. 50 ಮತ್ತು ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.90) ಸಣ್ಣ ಟ್ರ್ಯಾಕ್ಟರ್ ಖರೀದಿಗೆ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಸಣ್ಣ ಟ್ರ್ಯಾಕ್ಟರುಗಳಿಗೆ ರೂ.3.00ಲಕ್ಷ ಸಹಾಯಧನ ನೀಡಲಾಗುವುದು. ಕೃಷಿ ಸಂಸ್ಕರಣೆ ಘಟಕಗಳು ಮತ್ತು ಟಾರ್ಪಾಲೀನ್ ಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 50 ಮತ್ತು ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.90ರ ಸಹಾಯಧನವನ್ನು ನೀಡಲಾಗುತ್ತಿದೆ.
2. ಕೃಷಿ ಯಂತ್ರಧಾರೆ: ರಾಜ್ಯದಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಸಕಾಲದಲ್ಲಿ ಕೃಷಿ
ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ, ಕಡಿಮೆ ಬಾಡಿಗೆ ದರದಲ್ಲಿ ಭೂಮಿ ಸಿದ್ಧತೆಯಿಂದ ಕೊಯ್ದು ಮತ್ತು ಸಂಸ್ಕರಣೆಗೆ ಉಪಯುಕ್ತವಾಗುವ ವಿವಿಧ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದ ಮೇಲೆ ಉಪಯೋಗಿಸಲು ಅವಕಾಶ ಕಲ್ಪಿಸಲು ಹೋಬಳಿ ಕೇಂದ್ರಗಳಲ್ಲಿ ಆಯ ಸಂಸ್ಥೆಗಳ ಸಹಯೋಗದೊಂದಿಗೆ ಕೃಷಿ ಯಂತ್ರಧಾರೆ (ಕೃಷಿ ಯಂತ್ರೋಪಕರಣ ಬಾಡಿಗೆ ಆಧಾರಿತ ಸೇವಾ) ಕೇಂದ್ರಗಳನ್ನು ತೆರೆಯಲಾಗಿರುತ್ತದೆ.
3. ಮುಖ್ಯಮಂತ್ರಿಯವರ ಸೂಕ್ಷ್ಮ ನೀರಾವರಿ ಯೋಜನೆ
ರಾಜ್ಯದಲ್ಲಿ ಲಭ್ಯವಿರುವ ನೀರನ್ನು ಸಮರ್ಥ ಮತ್ತು ಸಮರ್ಪಕ ಬಳಕೆಗೆ ಪ್ರೋತ್ಸಾಹಿಸಲು ಹಾಗೂ ಮಿತ ಬಳಕೆಯಿಂದ ಅಧಿಕ ಇಳುವರಿ ಪಡೆಯಲು ಹಾಗೂ ಸೂಕ್ಷ್ಮ (ಹನಿ/ತುಂತುರು) ನೀರಾವರಿ ಪದ್ಧತಿಯ ಅಳವಡಿಕೆಗೆ ಎಲ್ಲಾ ವರ್ಗದ ರೈತರಿಗೆ 2.0 ಹೆಕ್ಟೇರ್ ಪ್ರದೇಶದವರೆಗೆ ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ರೈತರಿಗೆ ಅವರು ಹೊಂದಿರುವ ಪ್ರದೇಶಕ್ಕೆ ಶೇ.90 ರಷ್ಟು ಹಾಗೂ ಇತರೆ ರೈತರಿಗೆ 2.0ಹೆಕ್ಟೇರಿಗಿಂತ ಮೇಲ್ಪಟ್ಟು 5.0ಹೆಕ್ಟೇರ್
4. ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ
ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ/ ಕಿರು ಆಹಾರ ಸಂಸ್ಕರಣ ಉದ್ದಿಮೆಗಳಿಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಅವುಗಳ ಸರಪಳಿಕೊಂಡಿಯೊಂದಿಗೆ ಉತ್ತೇಜನ ನೀಡುವುದು ಯೋಜನೆಯ ಉದ್ದೇಶವಾಗಿರುತ್ತದೆ. ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ಅಭಿವೃದ್ಧಿ ನಿಗಮ (KAPPEC) ಮೂಲಕ ಅನುಷ್ಠಾನಗೊಳಿಸಲಾಗುತ್ತದೆ. ಈ ಯೋಜನೆಯ ಪ್ರಮುಖ ಅಂಶವು ಒಂದು ಜಿಲ್ಲೆಗೆ ಒಂದು ಉತ್ಪನ್ನವನ್ನು (One District One Product) ಗುರುತಿಸಿ ಉತ್ತೇಜಿಸುವುದು ಆಗಿರುತ್ತದೆ. ಈ ಬೆಳೆ / ಉತ್ಪನ್ನವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿರುವ ಅತಿ ಸಣ್ಣ ಉದ್ದಿಮೆಗಳಿಗೆ ಸಾಲ ಆಧಾರಿತ ನೆರವು ನೀಡುವುದು, ಮೂಲಭೂತ ಸೌಕರ್ಯ ಗಳನ್ನು ಸೃಜಿಸುವುದು, ಬ್ಯಾಂಡಿಗ್ ಮತ್ತು ಮಾರುಕಟ್ಟೆಗೆ ನೆರವು ನೀಡುವುದು ಈ ಮುಂತಾದ ಕಾರ್ಯಕ್ರಮಗಳಿಗೆ ಯೋಜನೆಯಡಿಯಲ್ಲಿ ನೆರವು ನೀಡಲು ಅವಕಾಶ ಕಲ್ಪಿಸಲಾಗಿದೆ.
5. ಸೆಕಂಡರಿ ಕೃಷಿ ನಿರ್ದೇಶನಾಲಯ ಸ್ಥಾಪನೆ: ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿ
ಜನ್ಯ ಉತ್ಪನ್ನಗಳ ಸಂಸ್ಕರಣೆ, ಗ್ರಾಮೀಣ ಮತ್ತು ಗುಡಿ ಕೈಗಾರಿಕೆಗಳ ಮೂಲಕ ರೈತರಿಗೆ ಹೆಚ್ಚಿನ ಆದಾಯ ತರಲು ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಜನೆಗೆ:……. ಪೂರಕವಾಗಿ, ಕೃಷಿ ಉತ್ಪನ್ನಗಳಿಂದ “ಉಪ ಉತ್ಪನ್ನಗಳ ತಯಾರಿಕೆಗೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲು ಸುಸ್ಥಿರ ಹಾಗೂ ಕ್ರೋಡೀಕೃತ ವ್ಯವಸ್ಥೆಗಾಗಿ ಪ್ರತ್ಯೇಕ ರಾಜ್ಯ ಸೆಕಂಡಗಿ ಕೃಷಿ ನಿರ್ದೇಶನಾಲಯವನ್ನು ಅಧಿಸೂಚಿಸಲಾಗಿರುತ್ತದೆ. ಇದರಡಿ ಉತ್ಪಾದಿತ ಬೆಳೆಗಳ ಮೌಲ್ಯವರ್ಧನ, ಪರ್ಯಾಯ ಉದ್ಯಮಗಳಿಗೆ ಉತ್ತೇಜನ ಮತ್ತು ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಶುಸಂಗೋಪನಾ ತ್ಯಾಜ್ಯಗಳ ಬಳಕೆಗೆ ಪ್ರೋತ್ಸಾಹ ನೀಡಲಾಗುವುದು.









