ಚಿಕ್ಕಬಳ್ಳಾಪುರ : ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ದಿನಗಳ ಬಳಿಕ ಕೊನೆಗೆ ಆರೋಪಿ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.
ಜನವರಿ12ರಂದು ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಕಲ್ಟ್ ಸಿನಿಮಾ ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದ. ಜನವರಿ 14ರಂದು ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ 13 ದಿನಗಳಿಂದ ಚಿಕ್ಕಬಳ್ಳಾಪುರ ಬಿಟ್ಟು ಪರಾರಿಯಾಗಿದ್ದ. ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಬಳಿ 3 ದಿನದಿಂದ ಆಶ್ರಯ ಪಡೆದಿದ್ದ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವು ಸಂಬಂಧ ಕೈ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಅವರ ವಿರುದ್ದ ಪೌರಾಯುಕ್ತೆ ದೂರು ನೀಡಿದ್ದರಿಂದ ಎಫ್‌ಐಆರ್ ದಾಖಲಾಗಿತ್ತು. ದೂರಿನ ಬಳಿಕ ತಲೆಮರೆಸಿಕೊಂಡಿದ್ದಂತ ರಾಜೀವ್ ಗೌಡ ಅವರನ್ನು ಕೊನೆಗೂ ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಇದೀಗ ರಾಜೀವ್ ಗೌಡಗೆ ಆಶ್ರಯ ನೀಡಿದ ಉದ್ಯಮೀನು ಕೂಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಮಂಗಳೂರು ಮೂಲದ ಉದ್ಯಮಿ ಮೈಕಲ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ರಾಜೀವ್ ಗೌಡನ ಜೊತೆಗೆ ಉದ್ಯಮಿ ಮೈಕಲ್ ಕೂಡ ಇದೀಗ ವಶಕ್ಕೆ ಪಡೆದುಕೊಳ್ಳಲಾಗಿದೆ ಇಬ್ಬರಿಗೂ ಬೆಳಗಿನ ತಿಂಡಿ ಕಾಫಿ ನೀಡಲಾಗಿದೆ.








