ಕೋಲಾರ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿಬಿಳಿಸುವಂತಹ ಘಟನೆ ನಡೆದಿದ್ದು, ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪದ ಮೇಲೆ ರೈತ ಸಂಘದ ಕೋಲಾರ ಜಿಲ್ಲಾಧ್ಯಕ್ಷ ರಾಮೇಗೌಡನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಠಾಣೆ ಪೊಲೀಸರು ರಾಮೇಗೌಡನನು ಅರೆಸ್ಟ್ ಮಾಡಿದ್ದಾರೆ. 15 ವರ್ಷದ ಬಾಲಕಿಯನ್ನು ಬೆದರಿಸಿ ರಾಮೇಗೌಡ ಅತ್ಯಾಚಾರ ಎಸೆಗಿದ್ದಾನೆ ಎಂದು ಸಂತ್ರಸ್ತೆಯ ತಂದೆ ದೂರು ನೀಡಿದ್ದರು. ಈ ಹಿನ್ನೆಲೆ ಬಾಲಕಿಯ ತಂದೆ ನೀಡಿದ ದೂರನ್ನು ಆಧರಿಸಿ ರಾಮೇಗೌಡನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.a








