ಧಾರವಾಡ : ಧಾರವಾಡದಲ್ಲಿ ಗೂಡ ಘಟನೆ ಒಂದು ನಡೆದಿದ್ದು ಹುಚ್ಚುನಾಯಿ ದಾಳಿಯಿಂದ 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಮಿಶ್ರಿಕೋಟೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ರಸ್ತೆಯಲ್ಲಿ ತಿರುಗಾಡುತ್ತಿದ್ದವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಹುಚ್ಚು ನಾಯಿ ದಾಳಿಯಿಂದ ಹಲವರ ಕೈ, ಕಾಲು ಮತ್ತು ಮುಖಕ್ಕೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳಿಗೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಇನ್ನೂ ಕೆಲವರಿಗೆ ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿ ಮಾಡಿದ ಹುಚ್ಚು ನಾಯಿಯನ್ನು ಗ್ರಾಮಸ್ಥರು ಹಿಡಿದುಕೊಂಡಿದ್ದಾರೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








