Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೊಪ್ಪಳ : ಮಗನ ವಿರುದ್ಧ ದೂರು ನೀಡಿದ ಮರುದಿನವೇ ತಂದೆ ಅನುಮಾನಾಸ್ಪದ ಸಾವು : ಕೊಲೆ ಆರೋಪ

27/01/2026 4:14 PM

ರೈತರಿಗೆ ಹವಾಮಾನ ಆಧಾರಿತ ವಿಮೆ ಸಮರ್ಪಕವಾಗಿ ತಲುಪಿಸಲು ಕ್ರಮ: ಸಂಸದ ಬಿ.ವೈ.ರಾಘವೇಂದ್ರ

27/01/2026 4:11 PM

BREAKING : “ಯಾವುದೇ ತಾರತಮ್ಯ ಅಥ್ವಾ ಕಾನೂನಿನ ದುರುಪಯೋಗವಿಲ್ಲ’ ; ‘UGC’ ಹೊಸ ನಿಯಮಗಳ ಕುರಿತು ಕೇಂದ್ರ ಶಿಕ್ಷಣ ಸಚಿವ ಸ್ಪಷ್ಟನೆ!

27/01/2026 4:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಹವಾಮಾನ ಆಧಾರಿತ ವಿಮೆ ಸಮರ್ಪಕವಾಗಿ ತಲುಪಿಸಲು ಕ್ರಮ: ಸಂಸದ ಬಿ.ವೈ.ರಾಘವೇಂದ್ರ
KARNATAKA

ರೈತರಿಗೆ ಹವಾಮಾನ ಆಧಾರಿತ ವಿಮೆ ಸಮರ್ಪಕವಾಗಿ ತಲುಪಿಸಲು ಕ್ರಮ: ಸಂಸದ ಬಿ.ವೈ.ರಾಘವೇಂದ್ರ

By kannadanewsnow0927/01/2026 4:11 PM

ಶಿವಮೊಗ್ಗ : ಹವಾಮಾನ ಆಧಾರಿತ ಬೆಳೆ ವಿಮೆಯು ರೈತರಿಗೆ ಸಮರ್ಪಕವಾಗಿ ಲಭಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೂ ಕಳೆದ ಬಾರಿ ವಿಮೆ ಪಡೆಯುವಲ್ಲಿ ರೈತರಿಗೆ ಆದ ಅನ್ಯಾಯವನ್ನು ಸಹ ಸರಿಪಡಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ಹವಾಮಾನ ಆಧಾರಿತ ಬೆಳೆ ವಿಮೆಯಲ್ಲಿ ಜಿಲ್ಲೆಯ ರೈತರಿಗೆ ಸಾಕಷ್ಟು ಅನ್ಯಾಯವಾಗಿದೆ. ಕಳೆದ ಸಾಲಿನಲ್ಲಿ ರೂ. 70-80 ಕೋಟಿಯಷ್ಟು ವಿಮಾ ಮೊತ್ತ ನಷ್ಟವಾಗಿದೆ. ಆದ್ದರಿಂದ ಬೆಳೆ ನಷ್ಟವನ್ನು ನಿರ್ಧರಿಸುವ ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು.
ಜಿಲ್ಲೆಯಲ್ಲಿ ಒಟ್ಟು 280 ಮಳೆ ಮಾಪನ ಕೇಂದ್ರಗಳಿದ್ದು ಇದರಲ್ಲಿ 112 ಅಂದರೆ ಕೇವಲ ಶೇ.40 ರಷ್ಟು ಮಾತ್ರ ಕೆಲಸ ಮಾಡುತ್ತಿವೆ ಎಂದು ವರದಿ ನೀಡಲಾಗಿದೆ. ಈ ಕೇಂದ್ರಗಳ ಬ್ಯಾಕ್ ಅಪ್ ಸ್ಟೇಷನ್‌ಗಳು ಸಹ ಸರಿ ಇಲ್ಲ. ಈ ಬಗ್ಗೆ ಅಧಿಕಾರಿಗಳು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಹಾಗೂ ರೈತರಿಗೆ ವಿಮೆ ನೀಡುವಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕಳೆದ ಬಾರಿ ರೈತರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದರು.

ಹಾಗೂ ವಿಮೆ ನಿರ್ಧರಿಸುವ ಟರ್ಮ್ ಶೀಟ್ ಮಾನದಂಡವನ್ನು ಪಾರದರ್ಶಕಗೊಳಿಸಬೇಕು. ಸ್ಥಳೀಯ ಶಾಸಕರೊಂದಿಗೆ ಸಭೆ ನಡೆಸಿ ರೈತರ ಪರವಾಗಿ, ಅವರಿಗೆ ಅನುಕೂಲವಾಗುವಂತೆ ಟರ್ಮ್ ಶೀಟ್ ನ್ನು ಸಿದ್ದಪಡಿಸಬೇಕೆಂದು ತಿಳಿಸಿದರು.

ದಿಶಾ ಸಮಿತಿ ಸದಸ್ಯರಾದ ಗುರುಮೂರ್ತಿ, ಮಲೆನಾಡಿನಲ್ಲಿ ಎಲೆ ಚುಕ್ಕಿ ರೋಗದಿಂದ 40% ಬೆಳೆ ಇಲ್ಲವಾಗಿದೆ. ಮಧ್ಯಮ ವರ್ಗದ ರೈತರಿಗೆ ತೊಂದರೆಯಾಗುತ್ತಿದ್ದು, ಹವಾಮಾನ ಆಧಾರಿತ ವಿಮೆ ಕುರಿತು ತಕ್ಷಣ ಪರಿಶೀಲಿಸಿ ನಷ್ಟ ಭರಿಸುವಂತೆ ಮನವಿ ಮಾಡಿದರು. ಹಾಗೂ ಅಂಗನವಾಡಿ, ಶಾಲೆ, ಕಚೇರಿಗಳ ಮೇಲ್ಛಾವಣಿ ಸೋರಿಕೆ ಸಾಮಾನ್ಯವಾಗಿದ್ದು, ಈ ಕಟ್ಟಡಗಳ ಕಾಮಗಾರಿ ನಿರ್ವಹಿಸಿದ ಏಜೆನ್ಸಿಗಳನ್ನು ಪರಿಶೀಲಿಸಿ ಬ್ಲಾಕ್ ಲಿಸ್ಟ್ಗೆ ಸೇರಿಸುವ ಬಗ್ಗೆ ನಿರ್ಣಯ ಕೈಗೊಳ್ಳಬೇಕು ಎಂದರು.

ಸAಸದರು, ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಎಸ್ ಸಿ ಜನಸಂಖ್ಯೆ ಶೇ.40 ಕ್ಕಿಂತ ಹೆಚ್ಚಿರುವ ಗ್ರಾಮಗಳಿಗೆ ಸಮಗ್ರ ಅಭಿವೃದ್ದಿ ಕೈಗೊಳ್ಳಲು ಪ್ರಸಕ್ತ ವರ್ಷ 16 ಗ್ರಾಮಗಳು ಆಯ್ಕೆಯಾಗಿದ್ದು ಸರ್ಕಾರ ಇಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು.

ಶಿವಮೊಗ್ಗ -ತುಮಕೂರು ರಾಷ್ಟಿçÃಯ ಹೆದ್ದಾರಿ ಕಾಮಗಾರಿಗೆ ಸಂಬAಧಿಸಿದAತೆ ಕೆಲಸಗಳನ್ನು ಚುರುಕುಗೊಳಿಸಿ, ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಮುಗಿಸಬೇಕು. ಈ ಯೋಜನೆ ಮಂಜೂರಾಗಿ 4-5 ವರ್ಷಗಳಾಗಿದ್ದು, ಭೂಸ್ವಾಧೀನ ಪ್ರಕ್ರಿಯೆ ಕುರಿತು ಸ್ಪಷ್ಟತೆ ನೀಡಬೇಕು. ಹಾಲಿನ ಡೈರಿ ಬಳಿಯ ಅಂಡರ್ ಪಾಸ್ ಕೆಲಸವನ್ನು ತ್ವರಿತ ಗತಿಯಲ್ಲಿ ಮಾಡಬೇಕು. ಇಲ್ಲಿ ಜನರು ಮಕ್ಕಳು ಓಡಾಡುವುದು ತುಂಬಾ ಕಷ್ಟವಾಗಿದೆ ಹಾಗೂ ಶಿವನಿ ಮತ್ತು ಬೆಲೇನಹಳ್ಳಿಯಲ್ಲಿಯೂ ಓಡಾಟ ಕಷ್ಟ ಆಗುತ್ತಿದೆ. ಆದ್ದರಿಂದ ಎನ್‌ಹೆಚ್ ಅಧಿಕಾರಿಗಳು ಕೆಲಸಗಳನ್ನು ಶೀಘ್ರದಲ್ಲಿ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಶಿಕಾರಿಪುರ ತಾಲ್ಲೂಕಿನ ಕಲ್ಲಾಪುರ ಗೇಟ್ ಯಿಂದ ಕುಟ್ರಳ್ಳಿವರೆಗೆ ಕೇವಲ 30 ಕಿ ಮೀ ಇದ್ದರೂ ಇಲ್ಲಿ ಟೋಲ್ ನಿರ್ಮಿಸಿದ್ದು ಈ ಟೋಲ್ ಗೇಟಿನಿಂದಾಗಿ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ನಿಯಮಾವಳಿ ಪ್ರಕಾರ 60 ಕಿ.ಮೀ ಗೆ ಟೋಲ್ ನಿರ್ಮಿಸಬಹುದು ಎಂದಿದೆ. ಆದ್ದರಿಂದ ಈ ಟೋಲ್‌ನ್ನು ಬೇರೆಡೆ ಶಿಫ್ಟ್ ಮಾಡಬೇಕೆಂದು ಸದಸ್ಯರು, ಸಂಸದರು ತಿಳಿಸಿದರು.

ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ಅಂಡರ್ ಬ್ರಿಡ್ಜ್ಗೆ ಅನುಮೋದನೆ ದೊರೆತು ಒಂದು ವರ್ಷವಾಗಿದ್ದು ಶೀಘ್ರ ಕಾರ್ಯಾರಂಭ ಮಾಡಬೇಕು ಹಾಗೂ ರೂ.73 ಕೋಟಿ ವೆಚ್ಚದಲ್ಲಿ ಮಂಜೂರಾಗಿರುವ ಫ್ರೀಡಂ ಪಾರ್ಕ್ ಹಿಂದಿನ ಆರ್‌ಓಬಿ ಕಾಮಗಾರಿಯನ್ನು ಸಹ ಶೀಘ್ರದಲ್ಲಿ ಆರಂಭಿಸಬೇಕೆAದು ರೈಲ್ವೆ ಅಧಿಕಾರಿಗಳು ಮತ್ತು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಸಾಗರ ತಾಲ್ಲೂಕಿನ ಮೇಘಾನೆಯಲ್ಲಿ ಬಿಎಸ್ ಎನ್ ಎಲ್ ಟವರ್ ಆಗಬೇಕು. ಪ್ರಸ್ತುತ ಅಳವಡಿಸಲಾಗಿರುವ ಟವರ್‌ಗಳಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಸರಪಡಿಸಬೇಕು. ಹಳೆಯ ಟವರ್ ಗಳನ್ನು ಪರಿಶೀಲಿಸಿ ದುರಸ್ತಿಪಡಿಸಬೇಕು ಹಾಗೂ ಇದಕ್ಕೆ ಸಂಬAಧಿಸಿದ ಬಾಕಿ ಕಡತಗಳನ್ನು ವಿಲೇ ಮಾಡಬೇಕೆಂದು ಬಿಎಸ್‌ಎನ್‌ಎಲ್ ಎಜಿಎಂ ರಿಗೆ ಸೂಚನೆ ನೀಡಿದರು.

ಪಿಎಂಜಿಎಸ್‌ವೈ ಯೋಜನೆಯಡಿ ರಾಜ್ಯಕ್ಕೆ ಒಟ್ಟು 53 ಕಾಮಗಾರಿಗಳು ಮಂಜೂರಾಗಿದ್ದು ಅದರಲ್ಲಿ ಶೇ.50 ರಷ್ಟು ಅಂದರೆ 25 ಕಾಮಗಾರಿಗಳು ಶಿವಮೊಗ್ಗ ಜಿಲ್ಲೆಗೆ ಮಂಜೂರಾಗಿದ್ದು, ಹೊಸನಗರ 14, ಸಾಗರ 06, ತೀರ್ಥಹಳ್ಳಿ 01 ಸೊರಬ 04 ಕಾಮಗಾರಿಗಳು ಮಂಜೂರಾಗಿದ್ದು ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.

ರಸ್ತೆ ಡಾಂಬರೀಕರಣ ಹಾಳಾಗಿರುವೆಡೆ ಜಿ.ಪಂ ಸಿಇಓ ಅವರು ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚನೆ ನೀಡಬೇಕು ಎಂದ ಅವರು ಪಿಎಂಜಿಎಸ್‌ವೈ ಯೋಜನೆಯ ಕಾಮಗಾರಿಗಳನ್ನು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದು ಇತರೆ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯವೆಸಗಬೇಕೆಂದರು.

ದಿಶಾ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ್ ಮಾತನಾಡಿ, ರಸ್ತೆಗಳಲ್ಲಿ ಶಾರ್ಟ್ ಕರ್ವ್ಗಳಿಂದಾಗಿ ರಸ್ತೆ ಅಪಘಾತಗಳು ಹೆಚ್ಚುತ್ತಿವೆ ಆದ್ದರಿಂದ ಎನ್ ಹೆಚ್ ಸೇರಿದಂತೆ ಎಲ್ಲ ರಸ್ತೆ ಗಳಲ್ಲಿ ಬ್ಲಾಕ್ ಸ್ಪಾಟ್ಸ್ಗಳನ್ನು ಗುರುತಿಸಿ ಪಟ್ಟಿ ಮಾಡಿ, ಸೂಕ್ತ ಕ್ರಮ ವಹಿಸಬೇಕೆಂದು ಹಾಗೂ ಜನರಿಗೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಜೆಜೆಎಂ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಜನರಿಗೆ ನ್ಯಾಯ ಒದಗಿಸಬೇಕು ಹಾಗೂ ಜಲಶಕ್ತಿ ಯೋಜನೆಯನ್ನು ಸರಿಪಡಿಸಬೇಕೆಂದು ಮನವಿ ಮಾಡಿದರು.

ಗ್ರಾಮೀಣ ನೀರು ಸರಬರಾಜು ಇಲಾಖೆ ಕಾರ್ಯಪಾಲಕ ಅಭಿಯಂತರರು ಮಾತನಾಡಿ ಜೆಜೆಎಂ ಯೋಜನೆಯಡಿ ಜಿಲ್ಲೆಗೆ ಓವರ್‌ಹೆಡ್, ಬೋರ್‌ವೆಲ್, ನಳ ಸಂಪರ್ಕ ಸೇರಿ 2528 ಕಾಮಗಾರಿಗಳು ಮಂಜುರಾಗಿದ್ದು 2023 ಪೂರ್ಣಗೊಂಡಿವೆ, 494 ಚಾಲ್ತಿಯಲ್ಲಿದ್ದು ಶೇ.86 ಕೆಲಸ ಆಗಿದೆ. ರೂ 728 ಕೋಟಿ ಮಂಜೂರಾಗಿದ್ದು 628 ಕೋಟಿ ವೆಚ್ಚವಾಗಿದೆ ಎಂದರು.

ದಿಶಾ ಸಮಿತಿ ಸದಸ್ಯರಾದ ಗಿರೀಶ್ ಭದ್ರಾಪುರ ಮಾತನಾಡಿ 70 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಕೊಳಚೆ ನೀರು ನದಿಗೆ ಸೇರ್ಪಡೆಯಾಗುತ್ತಿರುವ ಕಾರಣ ಆ ನೀರು ತಮಗೆ ಬೇಡವೆಂದು ಪಿಳ್ಳಂಗಿರಿ, ಬುಳ್ಳಾಪುರ ಇತರೆ ಗ್ರಾಮಸ್ಥರು ಈ ನೀರನ್ನು ಬಳಕೆ ಮಾಡಲು ಒಪ್ಪುತ್ತಿಲ್ಲ. ಗುಂಡಪ್ಪ ಶೆಡ್, ರಾಮಣ್ಣಶೆಟ್ಡಿ ಪಾರ್ಕ್ ಮತ್ತು ಚಟ್ನಹಳ್ಳಿಯಲ್ಲಿ ಕೊಳಚೆ ನೀರು ನದಿಗೆ ಸೇರ್ಪಡೆಯಾಗುತ್ತಿದ್ದು ಇದನ್ನು ಕೂಡಲೇ ಪರಿಶೀಲಿಸಿ ಕ್ರಮ ವಹಿಸಬೇಕೆಂದರು.
ಸAಸದರು, ಶಿವಮೊಗ್ಗ ಸೇರಿದಂತೆ ಭದ್ರಾವತಿ ಮತ್ತು ಇತರ ನಗರ ಪ್ರದೇಶದಲ್ಲಿ ಕೊಳಚೆ ನೀರು ನದಿಗೆ ಸೇರುತ್ತಿರುವ ಬಗ್ಗೆ ಪರಿಶೀಲಿಸಿ ಆದ್ಯತೆ ಮೇಲೆ ಇದನ್ನು ತಡೆ ಹಿಡಿಯಬೇಕು ಎಂದು ಸೂಚಿಸಿದರು.

ಕೋಟೆಗಂಗೂರು ಮತ್ತು ಶಿಕಾರಿಪುರ ಬ್ರಾಡ್‌ಗೇಜ್ ಯೋಜನೆಗೆ ಸಂಬAಧಿಸಿದAತೆ ಇಲ್ಲಿಗೆ ಕರ್ನಾಟಕ ನಗರ ನೀರು ಮಂಡಳಿ ವತಿಯಿಂದ ನೀರು ಸರಬರಾಜು ಮಾಡಲು ಕ್ರಮ ವಹಿಸುವಂತೆ ತಿಳಿಸಿದರು.

ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ: 2024–25ನೇ ಸಾಲಿನ ಸಂಸತ್ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ,ಅರ್ಹ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ ಮಾಡಿ, ವಿಕಲಚೇತನರು ಸ್ವಾವಲಂಬಿಗಳಾಗಿ, ಆತ್ಮಗೌರವದೊಂದಿಗೆ ಬದುಕು ಕಟ್ಟಿಕೊಳ್ಳಲು ಚಲನೆಯ ಸ್ವಾತಂತ್ರ‍್ಯ ಅತ್ಯಂತ ಅವಶ್ಯಕ. ಈ ದ್ವಿಚಕ್ರವಾಹನಗಳು ಅವರ ಶಿಕ್ಷಣ, ಉದ್ಯೋಗ ಹಾಗೂ ದಿನನಿತ್ಯದ ಜೀವನವನ್ನು ಸುಲಭಗೊಳಿಸಿ, ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು.

ಈ ಸಭೆಯಲ್ಲಿ ದಿಶಾ ಸಮಿತಿ ಸದಸ್ಯರಾದ ದೇವೇಂದ್ರಪ್ಪ, ಮಹಾದೇವಪ್ಪ, ಸುವರ್ಣ, ಗುರುಮೂರ್ತಿ, ಗಿರೀಶ್ ಭದ್ರಾಪುರ, ಆನಂದ್ , ನಗರಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾ ಪಂ ಅಧ್ಯಕ್ಷರು, ಸದಸ್ಯರು, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿ.ಪಂ.ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಕೇಂದ್ರ ಸರ್ಕಾರವು ನರೇಗಾ ಮರುಸ್ಥಾಪನೆವರೆಗೂ ಕಾಂಗ್ರೆಸ್ ಪಕ್ಷದಿಂದ ಹೋರಾಟ: ಸಚಿವ ಎಂ.ಬಿ ಪಾಟೀಲ್

ರಾಜ್ಯದ ಗ್ರಾಮ ಪಂಚಾಯ್ತಿ ಕಚೇರಿಗಳಿಗೆ ‘ಮಹಾತ್ಮ ಗಾಂಧಿ’ ಹೆಸರಿಡಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

Share. Facebook Twitter LinkedIn WhatsApp Email

Related Posts

ಕೊಪ್ಪಳ : ಮಗನ ವಿರುದ್ಧ ದೂರು ನೀಡಿದ ಮರುದಿನವೇ ತಂದೆ ಅನುಮಾನಾಸ್ಪದ ಸಾವು : ಕೊಲೆ ಆರೋಪ

27/01/2026 4:14 PM1 Min Read

ಕೇಂದ್ರ ಸರ್ಕಾರವು ನರೇಗಾ ಮರುಸ್ಥಾಪನೆವರೆಗೂ ಕಾಂಗ್ರೆಸ್ ಪಕ್ಷದಿಂದ ಹೋರಾಟ: ಸಚಿವ ಎಂ.ಬಿ ಪಾಟೀಲ್

27/01/2026 4:04 PM1 Min Read

BREAKING : ಪೌರಾಯುಕ್ತೆಗೆ ಜೀವ ಬೆದರಿಕೆ ಆರೋಪ : ಮಧ್ಯಂತರ ಜಾಮೀನು ಕೋರಿ ರಾಜೀವ್ ಗೌಡ ಅರ್ಜಿ ಸಲ್ಲಿಕೆ

27/01/2026 3:41 PM1 Min Read
Recent News

ಕೊಪ್ಪಳ : ಮಗನ ವಿರುದ್ಧ ದೂರು ನೀಡಿದ ಮರುದಿನವೇ ತಂದೆ ಅನುಮಾನಾಸ್ಪದ ಸಾವು : ಕೊಲೆ ಆರೋಪ

27/01/2026 4:14 PM

ರೈತರಿಗೆ ಹವಾಮಾನ ಆಧಾರಿತ ವಿಮೆ ಸಮರ್ಪಕವಾಗಿ ತಲುಪಿಸಲು ಕ್ರಮ: ಸಂಸದ ಬಿ.ವೈ.ರಾಘವೇಂದ್ರ

27/01/2026 4:11 PM

BREAKING : “ಯಾವುದೇ ತಾರತಮ್ಯ ಅಥ್ವಾ ಕಾನೂನಿನ ದುರುಪಯೋಗವಿಲ್ಲ’ ; ‘UGC’ ಹೊಸ ನಿಯಮಗಳ ಕುರಿತು ಕೇಂದ್ರ ಶಿಕ್ಷಣ ಸಚಿವ ಸ್ಪಷ್ಟನೆ!

27/01/2026 4:10 PM

ಕೇಂದ್ರ ಸರ್ಕಾರವು ನರೇಗಾ ಮರುಸ್ಥಾಪನೆವರೆಗೂ ಕಾಂಗ್ರೆಸ್ ಪಕ್ಷದಿಂದ ಹೋರಾಟ: ಸಚಿವ ಎಂ.ಬಿ ಪಾಟೀಲ್

27/01/2026 4:04 PM
State News
KARNATAKA

ಕೊಪ್ಪಳ : ಮಗನ ವಿರುದ್ಧ ದೂರು ನೀಡಿದ ಮರುದಿನವೇ ತಂದೆ ಅನುಮಾನಾಸ್ಪದ ಸಾವು : ಕೊಲೆ ಆರೋಪ

By kannadanewsnow0527/01/2026 4:14 PM KARNATAKA 1 Min Read

ಕೊಪ್ಪಳ : ಕೊಪ್ಪಳದ ಕನಕಗಿರಿ ತಾಲ್ಲೂಕಿನ ವರಣಖೇಡ ಗ್ರಾಮದಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ…

ರೈತರಿಗೆ ಹವಾಮಾನ ಆಧಾರಿತ ವಿಮೆ ಸಮರ್ಪಕವಾಗಿ ತಲುಪಿಸಲು ಕ್ರಮ: ಸಂಸದ ಬಿ.ವೈ.ರಾಘವೇಂದ್ರ

27/01/2026 4:11 PM

ಕೇಂದ್ರ ಸರ್ಕಾರವು ನರೇಗಾ ಮರುಸ್ಥಾಪನೆವರೆಗೂ ಕಾಂಗ್ರೆಸ್ ಪಕ್ಷದಿಂದ ಹೋರಾಟ: ಸಚಿವ ಎಂ.ಬಿ ಪಾಟೀಲ್

27/01/2026 4:04 PM

BREAKING : ಪೌರಾಯುಕ್ತೆಗೆ ಜೀವ ಬೆದರಿಕೆ ಆರೋಪ : ಮಧ್ಯಂತರ ಜಾಮೀನು ಕೋರಿ ರಾಜೀವ್ ಗೌಡ ಅರ್ಜಿ ಸಲ್ಲಿಕೆ

27/01/2026 3:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.