ನವದೆಹಲಿ : ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು “ಅಭೂತಪೂರ್ವ ಹೊಂದಾಣಿಕೆಯ ಸಂಕೇತ” ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಭಾರತ-ಇಯು ವ್ಯವಹಾರ ವೇದಿಕೆಯಲ್ಲಿ ಮಾತನಾಡಿದ ಮೋದಿ, ಭಾರತ ಮತ್ತು ಯುರೋಪಿಯನ್ ನಾಯಕರ ನಡುವಿನ ಸ್ನೇಹದ ಹೊಸ ಯುಗ ಪ್ರಾರಂಭವಾಗಿದೆ ಎಂದು ಹೇಳಿದರು.
ಭಾರತ-EU ವ್ಯಾಪಾರ ವೇದಿಕೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು, “ಯುರೋಪಿಯನ್ ಯೂನಿಯನ್ ಕೌನ್ಸಿಲ್ ಮತ್ತು ಆಯೋಗದ ಅಧ್ಯಕ್ಷರ ಭಾರತ ಭೇಟಿ ಸಾಮಾನ್ಯ ರಾಜತಾಂತ್ರಿಕ ಭೇಟಿಯಲ್ಲ. ಇದು ಭಾರತ-ಯುರೋಪಿಯನ್ ಯೂನಿಯನ್ ಸಂಬಂಧಗಳಲ್ಲಿ ಹೊಸ ಯುಗಕ್ಕೆ ನಾಂದಿ ಹಾಡುತ್ತದೆ. ಮೊದಲ ಬಾರಿಗೆ, ಯುರೋಪಿಯನ್ ಯೂನಿಯನ್ ನಾಯಕರು ಭಾರತದ ಗಣರಾಜ್ಯೋತ್ಸವ ಆಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ. ಭಾರತದ ಇತಿಹಾಸದಲ್ಲಿಯೇ ಅತಿದೊಡ್ಡ ಮುಕ್ತ ವ್ಯಾಪಾರ ಒಪ್ಪಂದವನ್ನ ಭಾರತ ಮತ್ತು ಯುರೋಪಿಯನ್ ಒಕ್ಕೂಟದ ನಡುವೆ ಮುಕ್ತಾಯಗೊಳಿಸಲಾಗುತ್ತಿದೆ ಮತ್ತು ಇಂದು, ಅನೇಕ CEOಗಳೊಂದಿಗೆ ದೊಡ್ಡ ಪ್ರಮಾಣದ ಭಾರತ-ಯುರೋಪಿಯನ್ ಯೂನಿಯನ್ ವ್ಯಾಪಾರ ವೇದಿಕೆಯನ್ನ ನಡೆಸಲಾಗುತ್ತಿದೆ. ಈ ಎಲ್ಲಾ ಸಾಧನೆಗಳು ವಿಶ್ವದ ಎರಡು ದೊಡ್ಡ ಪ್ರಜಾಪ್ರಭುತ್ವ ಶಕ್ತಿಗಳ ನಡುವೆ ನಡೆಯುತ್ತಿರುವ ಅಭೂತಪೂರ್ವ ಹೊಂದಾಣಿಕೆಯನ್ನು ಸಂಕೇತಿಸುತ್ತವೆ…”ಎಂದಿದ್ದಾರೆ.
BREAKING: ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ 14 ದಿನಗಳ ನ್ಯಾಯಾಂಗ ಬಂಧನ








