2025-26 ನೇ ಸಾಲಿಗೆ ಮುಂಗಾರು ಹಂಗಾಮಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳ ಉತ್ಪನ್ನಕ್ಕೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ಉದ್ದೇಶಿಸಲಾಗಿದ್ದು, ಅರ್ಹ ರೈತರು ನೋಂದಾಯಿಸಿಕೊಳ್ಳುವAತೆ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಶಾಖಾ ವ್ಯವಸ್ಥಾಪಕರು, ವಿಜಯನಗರ ಜಿಲ್ಲೆ ಇವರಿಂದ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳ ಉತ್ಪನ್ನಕ್ಕೆ ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಾಲ್ಗೆ ಗರಿಷ್ಠ ರೂ. 2,150/- ನಿಗಧಿಪಡಿಸಿದ ಬೆಲೆ ಗೆ ಮೆಕ್ಕೆಜೋಳ ಉತ್ಪನ್ನಕ್ಕೆ ನಿಯಂತ್ರಿತ ಮಾರುಕಟ್ಟೆಗಳಲ್ಲಿ ಆಗುವ ವಹಿವಾಟಿನ ಧಾರಣೆಯ ಆಧಾರದ ಮೇಲೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುತ್ತದೆ.
ಈ ಯೋಜನೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಸಂಸ್ಥೆಯ ಮೂಲಕ ಅನುಪ್ಠಾನಗೊಳಿಸಲಾಗುತ್ತಿದೆ. ಮಾರುಕಟ್ಟೆಗಳಲ್ಲಿ ವಹಿವಾಟು ಆಗುವ ಧಾರಣೆ ಪರಿಗಣಿಸಿ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ ರೂ.250/- ರಂತೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುವುದು.
ರೈತರು ನೋಂದಣಿ ಮಾಡಿಸಿಕೊಳ್ಳಲು ಜಿಲ್ಲೆಯ ವಿವಿಧೆಡೆ ನೋಂದಣಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕೋರಿದ್ದಾರೆ.
*ನೋಂದಣಿ ಕೇಂದ್ರಗಳು:*
ಬಳ್ಳಾರಿ ತಾಲ್ಲೂಕಿನ ಶ್ರೀಧರಗಡ್ಡೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಶ್ರೀಧರಗಡ್ಡೆ, ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಕಚೇರಿ-ಮೊ.6363153309.
ಬಳ್ಳಾರಿ ನಗರದ ಎಸ್ಪಿ ವೃತ್ತದ ರೈತ ಸೇವಾ ಸಹಕಾರ ನಿಯಮಿತ-ಮೊ.9535380789. ಸಂಡೂರು ಪಟ್ಟಣದ ವಿಜಯ ವೃತ್ತದ ಬಳ್ಳಾರಿ ಮುಖ್ಯ ರಸ್ತೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಮೊ.9980676497.
ಸAಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಮೊ.9008397644. ಸಿರುಗುಪ್ಪ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸಿರುಗುಪ್ಪ-2 ( ಬೆಳಗಲ್ಲು), ಸಿರುಗುಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಕಚೇರಿ-ಮೊ.7259598625.
ಕುರುಗೋಡು ಪಟ್ಟಣದ ಅಂಚೆ ಕಚೇರಿ ಹತ್ತಿರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಮೊ.8951307333.
ಈ ಯೋಜನೆಯಡಿ ಪ್ರತಿ ಎಕರೆಗೆ 12 ಕ್ವಿಂಟಾಲ್ ನಂತೆ ಫ್ರೂಟ್ಸ್ ತಂತ್ರಾAಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ 50 ಕ್ವಿಂಟಾಲ್ ಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡಲಾಗುವುದು.
ಮೆಕ್ಕೆಜೋಳ ಉತ್ಪನ್ನಕ್ಕೆ ಪ್ರಚಲಿತ ಮಾರುಕಟ್ಟೆಗಳಲ್ಲಿ ವಹಿವಾಟು ಆಗುತ್ತಿರುವುದನ್ನು ಪರಿಗಣಿಸಿ ಮಾರುಕಟ್ಟೆ ಮಧ್ಯಪ್ರವೇಶ ದರ ಪ್ರತಿ ಕ್ವಿಂಟಾಲ್ಗೆ ಗರಿಷ್ಠ ರೂ.2,150 ಗಳನ್ನು ನಿಗದಿಪಡಿಸಿದೆ. ಈ ಮೊತ್ತಕ್ಕೆ ಅಥವಾ ಈ ಮೊತ್ತಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟವಾದಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ.
ರೈತರು ಜಿಲ್ಲೆಯಲ್ಲಿಯೇ ನೋಂದಣಿ ಮಾಡಿಸಿಕೊಳ್ಳಬೇಕು, ನೋಂದಣಿ ಮಾಡಿಸಿಕೊಂಡ ರೈತರು ಮೆಕ್ಕೆಜೋಳವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಥವಾ ಹತ್ತಿರದ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ವೇದಿಕೆ ಮೂಲಕ ಮೆಕ್ಕೆಜೋಳ ವಹಿವಾಟುವಾಗುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಾದ ಕೊಟ್ಟೂರು, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಮಾರುಕಟ್ಟೆ ಪ್ರಾಂಗಣಗಳಲ್ಲಿಯೂ ಸಹ ಮಾರಾಟ ಮಾಡಿಕೊಳ್ಳಬಹುದು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳಿಂದ ಏಕೀಕೃತ ಮಾರುಕಟ್ಟೆ ವ್ಯವಸ್ಥೆ ತಂತ್ರಾAಶದಲ್ಲಿ ದಾಖಲಾದ ನೋಂದಾಯಿತ ರೈತರ ಮಾರಾಟದ ದೃಢೀಕರಣವಾದ ನಂತರ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪರಿಶೀಲಿಸಿ ವ್ಯತ್ಯಾಸದ ಮೊತ್ತವನ್ನು ಡಿಬಿಟಿ ಮುಖಾಂತರ ರೈತರ ಖಾತೆಗೆ ಪಾವತಿಸಲಾಗುವುದು.
ಈಗಾಗಲೇ ರಾಜ್ಯ ಸರ್ಕಾರದ ವತಿಯಿಂದ ಎಥೆನಾಲ್ ಉತ್ಪಾದನೆಗಾಗಿ, ಕುಕ್ಕುಟ ಮತ್ತು ಪಶು ಆಹಾರ ತಯಾರಿಕಾ ಘಟಕಗಳಿಗೆ ಹಾಗೂ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಕ್ಕೆ ಅವ್ಯಶ್ಯವಿರುವ ಮೆಕ್ಕೆಜೋಳ ಪೂರೈಕೆ ಮಾಡಿರುವ ರೈತರಿಗೆ ಈ ಯೋಜನೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಸಮಯ ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಮಾತ್ರ ರೈತರ ನೋಂದಣಿ ಕಾರ್ಯ ಕೈಗೊಳ್ಳಲಾಗುವುದು. ಈ ಯೋಜನೆಯ ಅನುಪ್ಠಾನ ಅವಧಿಯು ಮೆಕ್ಕೆಜೋಳ ಉತ್ಪನ್ನದ ಮೊದಲ ವಹಿವಾಟು ಯುಎಂಪಿ ತಂತ್ರಾAಶದಲ್ಲಿ ಆಗುವ ದಿನಾಂಕದಿAದ ರಾಜ್ಯಾದ್ಯಂತ ಒಂದು ತಿಂಗಳ ಅವಧಿಯ ವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








