ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಫ್ರೀಡಂಪಾರ್ಕ್ ನಲ್ಲಿ “ಮನರೇಗಾಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ ಅವರು, ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ ಎಂದರು.
ಗ್ರಾಮೀಣ ಆರ್ಥಿಕತೆಗೆ ಬಲ ತುಂಬಿ, ಆ ಮೂಲಕ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದು ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಆಶಯವಾಗಿತ್ತು. ಈ ಚಿಂತನೆಯ ಮೇಲೆ ಜೀವ ತಳೆದದ್ದೇ ಮನರೇಗಾ ಯೋಜನೆ. ಬಡಜನರಿಗೆ ಕೆಲಸವನ್ನು ಸಂವಿಧಾನಾತ್ಮಕ ಹಕ್ಕನ್ನಾಗಿಸಿ, ವರ್ಷದ ಯಾವುದೇ ದಿನಗಳಲ್ಲಿ, ಅವರು ವಾಸಿಸುವ ಸ್ಥಳದಲ್ಲೇ ಉದ್ಯೋಗ ಒದಗಿಸುವುದು ಮನರೇಗಾ ಯೋಜನೆಯ ಮೂಲ ಆಶಯ. ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ಕೇವಲ ಮಹಾತ್ಮ ಗಾಂಧಿಯವರ ಹೆಸರಿನ ಯೋಜನೆ ರದ್ದು ಮಾಡಿರುವುದಲ್ಲ, ಬದಲಿಗೆ ಗ್ರಾಮೀಣ ಆರ್ಥಿಕತೆಯನ್ನೇ ಬುಡಮೇಲು ಮಾಡಲು ಹೊರಟಿದೆ ಎಂದರು.
ಅಂದು ನಾಥೂರಾಮ ಗೋಡ್ಸೆಯ ಗುಂಡೇಟಿಗೆ ಮಹಾತ್ಮ ಗಾಂಧಿ ಬಲಿಯಾದ ಬಳಿಕ ಹೇಗೆ ಮನೆ ಮನೆಗೆ ಗಾಂಧಿ ವಿಚಾರಧಾರೆಗಳು ಹೆಚ್ಚೆಚ್ಚು ತಲುಪಿತೋ, ಇನ್ನು ಮುಂದೆ ಹಾಗೆಯೇ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಗಾಂಧೀಜಿಯವರ ಹೆಸರು ರಾರಾಜಿಸಲಿದೆ. ಮುಂಬರುವ ಬಜೆಟ್‌ನಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗುವುದು.
ಅಳಿಸಿ ಹಾಕಲು ಗಾಂಧಿ ಎಂಬುದು ಬರಿ ಹೆಸರಲ್ಲ, ಅನ್ಯಾಯ – ಅಸತ್ಯಗಳ ವಿರುದ್ಧದ ಹೋರಾಟಕ್ಕೆ ಕೋಟ್ಯಂತರ ಭಾರತೀಯರಿಗೆ ಇಂದಿಗೂ ಪ್ರೇರಕ ಶಕ್ತಿಯಾಗಿದೆ.. ಮುಂದೆಯೂ ಗಾಂಧಿಯೇ ಈ ದೇಶದ ಆದರ್ಶ ಮತ್ತು ಅಸ್ಮಿತೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಆರ್ಥಿಕತೆಗೆ ಬಲ ತುಂಬಿ, ಆ ಮೂಲಕ ಭಾರತವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದು ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಆಶಯವಾಗಿತ್ತು. ಈ ಚಿಂತನೆಯ ಮೇಲೆ ಜೀವ ತಳೆದದ್ದೇ ಮನರೇಗಾ ಯೋಜನೆ. ಬಡಜನರಿಗೆ ಕೆಲಸವನ್ನು ಸಂವಿಧಾನಾತ್ಮಕ ಹಕ್ಕನ್ನಾಗಿಸಿ, ವರ್ಷದ ಯಾವುದೇ ದಿನಗಳಲ್ಲಿ, ಅವರು ವಾಸಿಸುವ ಸ್ಥಳದಲ್ಲೇ ಉದ್ಯೋಗ ಒದಗಿಸುವುದು… pic.twitter.com/BzYAzvKJsg
— Siddaramaiah (@siddaramaiah) January 27, 2026








