ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದ್ದು, ಉದ್ಯಮಿ ಮನೆಯಲ್ಲಿ 18 ಕೋಟಿ ರೂ. ಮೌಲ್ಯದ ವಜ್ರ, ಬೆಳ್ಳಿ, ನಗದು ದೋಚಿ ದಂಪತಿಗಳು ಪರಾರಿಯಾಗಿದ್ದಾರೆ.
ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿ ಉದ್ಯಮಿ ಶಿವಕುಮಾರ್ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್, ಕಮಲಾ ದಂಪತಿ ಕಳ್ಳತನ ಮಾಡಿದ್ದಾರೆ.
20 ದಿನದ ಹಿಂದೆಯಷ್ಟೇ ದಂಪತಿ ಕೆಲಸಕ್ಕೆ ಸೇರಿಕೊಂಡಿದ್ದ ದಂಪತಿ 11.5 ಕೆಜಿ ಚಿನ್ನ, ವಜ್ರ, 5 ಕೆಜಿ ಬೆಳ್ಳಿ, 11.5 ಲಕ್ಷ ನಗದು ಕಳವು ಮಾಡಿ ಪರಾರಿಯಾಗಿದ್ದಾರೆ. ಜನವರಿ 25ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳವು ಮಾಡಿದ್ದಾರೆ.
ನೆಲಮಹಡಿ, ಮೊದಲ ಮಹಡಿಯ ಬೆಡ್ರೂಮ್ ಲಾಕ್ ಮುರಿದು 18 ಕೋಟಿ ರೂ. ಮೌಲ್ಯದ 11.5 ಕೆಜಿ ಚಿನ್ನ, ವಜ್ರ, ಐದು ಕೆಜಿ ಬೆಳ್ಳಿ, 11.5 ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.
ಮಾರತ್ತಹಳ್ಳಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೃತ್ಯವೆಸಗಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.








