ಮಹಾರಾಷ್ಟ್ರ: ಇಂದು ವಿಮಾನ ಪಥನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ದುರ್ಮರಣ ಹೊಂದಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಮಧ್ಯಾಹ್ನ 11 ಗಂಟೆಗೆ ನೆರವೇರಿಸಲಾಗುತ್ತಿದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ದುರ್ಮರಣ ಹೊಂದಿದ್ದಾರೆ. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ನಡೆಸಲಾಗುತ್ತಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಅಜಿತ್ ಪವಾರ್ ಅಂತ್ಯಕ್ರಿಯೆ ನೆರವೇರಲಿದೆ.
ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಅಜಿತ್ ಪವಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಜಿತ್ ಪವಾರ್ 1959ರ ಜುಲೈ 22ರಂದು ಜನಿಸಿದ್ದರು. 1982ರಲ್ಲಿ ಅಜಿತ್ ಪವಾರ್ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ಕೋ ಆಪರೇಟಿವ್ ಸಕ್ಕರೆ ಕಾರ್ಖಾನೆ ಬೋರ್ಡ್ ಸದಸ್ಯರಾದರು. 1991ರಲ್ಲಿ ಪುಣೆ ಜಿಲ್ಲಾ ಕೋ ಆಪರೇಟಿವ್ ಸಂಘದ ಅಧ್ಯಕ್ಷರಾಗಿ ಆಯ್ಕೆ. 1991ರಲ್ಲೇ ಸಂಸದರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು.4 ತಿಂಗಳಲ್ಲೇ ಸಂಸದ ಸ್ಥಾನಕ್ಕೆ ಅಜಿತ್ ಪವಾರ್ ರಾಜೀನಾಮೆ.1995ರಲ್ಲಿ ಬಾರಾಮತಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1999ರಲ್ಲಿ 2ನೇ ಬಾರಿ ವಿಧಆನಸಭೆಗೆ ಅಜಿತ್ ಪವಾರ್ ಆಯ್ಕೆಯಾಗಿದ್ದರು.








