ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಪೊಲೀಸರು ಆರೋಪಿ ರಾಜೀವ್ ಗೌಡ ಬಂಧಿಸಿದ್ದರು. ಅವರಿಗೆ ನಿನ್ನೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ವಿಧಿಸಿತ್ತು. ಇಂದು ಹೆಚ್ಚಿನ ವಿಚಾರಣೆಗಾಗಿ 2 ದಿಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ ಆರೋಪಿ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ನಿನ್ನೆ ಶಿಡ್ಲಘಟ್ಟ ನ್ಯಾಯಾಲಯಕ್ಕೂ ಹಾಜರುಪಡಿಸಿದ್ದರು. ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು.
ಈ ಬೆನ್ನಲ್ಲೇ ಇಂದು ಅವರನ್ನು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿರುವಂತ ನ್ಯಾಯಾಲಯವು 2 ದಿನಗಳ ಕಾಲ ಆರೋಪಿ ರಾಜೀವ್ ಗೌಡ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಬೆಂಗಳೂರಲ್ಲಿ ‘ಸೌರ PV ಕನೆಕ್ಟರ್ ಪರಿಸರ ವ್ಯವಸ್ಥೆ’ಯನ್ನು ಬಲಪಡಿಸಲು ‘ಸ್ಟೌಬ್ಲಿ’ $10 ಮಿಲಿಯನ್ ಹೂಡಿಕೆ
ಅಜಿತ್ ಪವಾರ್ ಇದ್ದ ವಿಮಾನ ಪಥನದ ಹಿಂದಿನ ಕಾರಣ ಬಿಚ್ಚಿಟ್ಟ DGCA: ಅದೇನು ಗೊತ್ತಾ? | Ajit Pawar plane crash








