ಬೆಂಗಳೂರು: ನಾಳೆ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದರು. ಆದರೇ ಇಂದು ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರು ಅಕಾಲಿಕ ನಿಧನರಾದ ಹಿನ್ನಲೆಯಲ್ಲಿ, ಈ ಪ್ರತಿಭಟನೆಯನ್ನು ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಂತೆ ಸಾರಿಗೆ ನೌಕರರ ಸಂಘಟನೆಯ ಮುಖಂಡ ಜಗದೀಶ್ ಮಾಹಿತಿ ನೀಡಿದ್ದು, ನೌಕರರ ಹಿರಿಯ ಮುಖಂಡರಾದಂತ ಅನಂತ್ ಸುಬ್ಬರಾವ್ ಅವರು ಹೃದಯಾಘಾತದಿಂದ ಇಂದು ತೀರಿಕೊಂಡಿದ್ದಾರೆ. ಅವರ ನಿಧನಕ್ಕೆ ಸಂಘಟನೆಯು ಸಂತಾಪ ಸೂಚಿಸುತ್ತದೆ. ಈ ಹಿನ್ನಲೆಯಲ್ಲಿ ನಾಳೆ ಸಾರಿಗೆ ನೌಕರರಿಂದ ಹಮ್ಮಿಕೊಂಡಿದ್ದಂತ ಬೆಂಗಳೂರು ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದಿದ್ದಾರೆ.
ಅಂದಹಾಗೇ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಅವರು ಇಂದು ಸಂಜೆ 5.30ರ ಸುಮಾರಿಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ವಿಜಯನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಹಿನ್ನಲೆಯಲ್ಲೇ ನಾಳೆಯ ಬೆಂಗಳೂರು ಚಲೋ ಪ್ರತಿಭಟನೆಯನ್ನು ಸಾರಿಗೆ ನೌಕರರ ಸಂಘಟನೆಗಳು ಮುಂಡೂಡಿವೆ.
BREAKING NEWS: ಕರ್ನಾಟಕ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಇನ್ನಿಲ್ಲ | Ananth Subbarao No More
BIGG NEWS: ಇನ್ಮುಂದೆ ಕರ್ನಾಟಕದ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಧರಿಸುವುದು ಕಡ್ಡಾಯ!?








