ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನಿರೀಕ್ಷೆಯಲ್ಲಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಜನವರಿ.31, 2026ರವರೆಗೆ ಅವಕಾಶ ನೀಡಿದೆ.
ಈ ಕುರಿತಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ಗ್ರೇಡ್-02 ಹುದ್ದೆಯಿಂದ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಮುಂಬಡ್ತಿ ನೀಡುವ ಸಂಬಂಧ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಹಾಗೂ ಶಾಲಾ ಶಿಕ್ಷಣ ಇಲಾಖಾ ವೆಬ್‌ಸೈಟ್ ನಲ್ಲಿ ಪುಕಟಿತ ಜೇಷ್ಠತಾ ಪಟ್ಟಿಯಲ್ಲಿರುವ ಪ್ರೌಢಶಾಲಾ ಸಹಶಿಕ್ಷಕರು ಗ್ರೇಡ್-02 ವೃಂದದವರಿಗೆ ಮುಂಬಡ್ತಿ ನೀಡುವ ಉದ್ದೇಶದಿಂದ ಅರ್ಹತಾ ಪರೀಕ್ಷೆಯನ್ನು ನಡೆಸಲು ಅಧಿಸೂಚನೆಯನ್ನು ಹೊರಡಿಸಿ, ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:29/12/2025 ರಿಂದ 28/01/2026 ರವರೆಗೆ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದ್ದಾರೆ.
ಇಲಾಖಾ ವೆಬ್‌ಸೈಟ್‌ನಲ್ಲಿ ಮುಂಬಡ್ತಿ ಸಂಬಂಧ ಪ್ರಕಟಿತ ಜೇಷ್ಠತಾ ಪಟ್ಟಿಯಲ್ಲಿಲ್ಲದ ಹಾಗೂ ನಿಯಮಾನುಸಾರ ಅರ್ಹರಿರುವ ಕೆಲವು ಅರ್ಹ ಸಹಶಿಕ್ಷಕರು ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವಂತೆ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.
ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಜೇಷ್ಠತಾ ಪಟ್ಟಿಯಲ್ಲಿಲ್ಲದ ಹಾಗೂ ಪಿ.ಯು ಉಪನ್ಯಾಸಕರ ಹುದ್ದೆಗೆ ನಿಯಮಾನುಸಾರ ಅರ್ಹವಿದ್ದು, ಅರ್ಜಿ ಸಲ್ಲಿಸಲು ಬಯಸುವ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರಿಗೆ KGID ಸಂಖ್ಯೆಯನ್ನು ತಂತ್ರಾಂಶದಲ್ಲಿ ಸಡಿಲಗೊಳಿಸಿ, ಸಹಶಿಕ್ಷಕರೇ ತಮ್ಮ KGID ಸಂಖ್ಯೆಯನ್ನು ನಮೂದಿಸುವುದರ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಕೊನೆಯ ದಿನಾಂಕ:31/01/2026 ರವರೆಗೆ ವಿಸ್ತರಿಸಲಾಗಿದೆ ಎಂದಿದ್ದಾರೆ.

BREAKING NEWS: ಕರ್ನಾಟಕ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ಇನ್ನಿಲ್ಲ | Ananth Subbarao No More
BREAKING: ಅನಂತ್ ಸುಬ್ಬರಾವ್ ನಿಧನ ಹಿನ್ನಲೆ: ನಾಳೆಯ ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಿಕೆ








