ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಹಿರಿಯ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಬುಧವಾರ ವಿಮಾನ ಅಪಘಾತದಲ್ಲಿ ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಪತಿಯ ಕಾಲಿಗೆ ಪತ್ನಿ ಸುನೇತ್ರ ನಮಸ್ಕರಿಸಿ ಕಣ್ಣೀರು ಹಾಕಿದರು ಬಾರಾಮತಿ ವಿದ್ಯಾ ಪ್ರತಿಷ್ಠಾನ ವಿಧಾನದಲ್ಲಿ ಅಂತ್ಯಕ್ರಿಯೆ ನೆರವೇರಿತು. ಪುತ್ರರಾದ ಪಾರ್ಥ ಮತ್ತು ಜಯ್ ರಿಂದ ಅಂತಿಮ ವಿಧಿ ವಿಧಾನ ನೆರವೇರಿತು.
ಅಜಿತ್ ಪವಾರ್ ಅವರು ನಿನ್ನೆ ಬಾರಾಮತಿಗೆ ಪ್ರಯಾಣಿಸುತ್ತಿದ್ದರು, ಅಲ್ಲಿ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿರ್ಧರಿಸಲಾಗಿತ್ತು.ಅವರ ವೈಯಕ್ತಿಕ ಭದ್ರತಾ ಅಧಿಕಾರಿ, ವಿಮಾನ ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳು ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಐದು ಜನರು ಅಪಘಾತದಲ್ಲಿ ಸಾವನ್ನಪ್ಪಿದರು. ರಾಜ್ಯ ಸರ್ಕಾರ ಮೂರು ದಿನಗಳ ರಾಜ್ಯ ಶೋಕಾಚರಣೆಯನ್ನು ಘೋಷಿಸಿದೆ. ಇಂದು ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು. ಮಹಾರಾಷ್ಟ್ರದ ಅತಿ ಹೆಚ್ಚು ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅಜಿತ್ ಪವಾರ್ ಅವರನ್ನು ರಾಜ್ಯ ರಾಜಕೀಯದಲ್ಲಿ ಪ್ರಭಾವಿ ಮತ್ತು ನಿರ್ಣಾಯಕ ನಾಯಕಿ ಎಂದು ಪರಿಗಣಿಸಲಾಗಿದೆ.
ಈ ವೇಳೆ ಸಿಎಂ ದೇವೇಂದ್ರ ಫಡ್ನವೀಸ್ ಡಿಸಿಎಂ ಏಕನಾಥ ಶಿಂದೆ ಅಂತಿಮನ ಸಲ್ಲಿಸಿದರು. ಅಜಿತ್ ಪವಾರ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಬಿಜೆಪಿ ರಾಷ್ಟೀಯ ಅಧ್ಯಕ್ಷ ನಿತಿನ್ ನಬಿನ್ ಹಾಗು ಕೇಂದ್ರ ಸಚಿವ ನಿತಿನ್ ಗಡ್ಕರಿ avarus ಆಹಾ ಅಂತಿಮ ನಮನ ಸಲ್ಲಿಸಿದರು.







