ಬೆಂಗಳೂರು : ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಹಸ್ತಕ್ಷೇಪ ಮಾಡಿದ್ದರಿಂದ ಸಚಿವ ಕೇಜೆ ಜಾರ್ಜ್ ಬೇಸರದಿಂದ ರಾಜಿನಾಮೆಗೆ ಮುಂದಾಗಿದ್ದರು ಎನ್ನುವ ಸುದ್ದಿ ಭಾರಿ ಸಂಚಲನ ಸೃಷ್ಟಿಸಿತ್ತು. ಇದೀಗ ಸ್ವತಃ ಸಚಿವ ಕೆಜೆ ಚಾರ್ಜ್ ಅವರೇ ಸ್ಪಷ್ಟನೆ ನೀಡಿದ್ದು ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದಿನ ಸಚಿವ ಕೆ.ಜೆ ಜಾರ್ಜ್ ಮಾತನಾಡಿದ್ದು ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪ ಮಾಡಿಲ್ಲ ಈಗಾಗಲೇ ವಿಧಾನಸಭೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದೇನೆ. ಒಬ್ಬ ಸಚಿವರು ರಾಜೀನಾಮೆ ನೀಡುವುದು ಅಷ್ಟು ಸುಲಭವೇ? ನಾನು ಯಾವುದೇ ಅಧಿಕಾರಿ ವಿಚಾರದಲ್ಲಿ ಪಟ್ಟು ಹಿಡಿಯಲ್ಲ. ಯತೀಂದ್ರ ಒಳ್ಳೆಯವರು ಅವರಿಗೆ ಯಾಕೆ ಕೆಟ್ಟ ಹೆಸರು ನೀಡಲಿ?
ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಾಗ ಸುದ್ದಿಗೋಷ್ಠಿ ಸಹ ನಡೆಸಿದ್ದೆ, ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡಿದ್ದೆ. ನಾನು ಸಿಎಂ ಸಿದ್ದರಾಮಯ್ಯ ಪ್ರತಿದಿನ ಮಾತನಾಡುತ್ತೇವೆ. ಡಿಸಿಗಳು ಎಸಿಗಳು ಬರುತ್ತಾರೆ ಹೋಗುತ್ತಾರೆ. ಅಧಿಕಾರಿಗಳ ವರ್ಗಾವಣೆಯ ಬಗ್ಗೆ ಡಿಪಿಎಆರ್ ನವರು ನೋಡಿಕೊಳ್ಳುತ್ತಾರೆ ಪಂಕಜ ಕುಮಾರ ಪಾಂಡೆ ವಿಚಾರ ಸೇರಿ ಎಲ್ಲವೂ ಸೃಷ್ಟಿ ಅಷ್ಟೇ ಎಂದು ಸಚಿವ ಕೆಜೆ ಜಾರ್ಜ್ ತಿಳಿಸಿದರು.








