2020-21, 2021-22, 2022-23, 2023-24, 2024-25 ಮತ್ತು 2025-26 ನೇ ಸಾಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿರುವ ಕೆಲವೊಂದು ವಿದ್ಯಾರ್ಥಿಗಳಿಗೆ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ.
ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಕೊಳ್ಳದೆ ಇರುವುದು. ವಿದ್ಯಾರ್ಥಿಗಳ ಶೈಕ್ಷಣಿಕ ದತ್ತಾಂಶದಲ್ಲಿ ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ನಮೂದಿಸಿರುವ ಹೆಸರಿಗೂ ವ್ಯತ್ಯಾಸವಿರುವುದು. Counselling Course ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂಧರ್ಭದಲ್ಲಿ Counselling ದತ್ತಾಂಶ ನಮೂದಿಸದೇ ಇರುವುದು. ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ ವರ್ಷದ ದತ್ತಾಂಶವನ್ನು ವಿಶ್ವವಿದ್ಯಾಲಯಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದೊಂದಿಗೆ ಹಂಚಿಕೊಳ್ಳದೆ ಇರುವುದು.
ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ, ಮಾಹಿತಿಯನ್ನು ಅಪ್ಡೇಯಟ್ ಮಾಡಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ವಿದ್ಯಾರ್ಥಿಗಳ ಲಾಗಿನ್, ತಾಲ್ಲೂಕು/ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಲಾಗಿನ್ನಂಲ್ಲಿ ಅವಕಾಶ ನೀಡಲಾಗಿದ್ದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಹಾಗೂ ಒಂದು ವೇಳೆ ಜನವರಿ, 30 ರೊಳಗೆ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ಅಪ್ಡೇಗಟ್ ಮಾಡದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.








