ಬೆಂಗಳೂರು : ರಾಜ್ಯದ 6 ಸಾವಿರ ಗ್ರಾಮ ಪಂಚಾಯಿತಿಗಳಿಗೆ ಗಾಂಧೀಜಿ ಅವರ ಹೆಸರು ಇಡುತ್ತೇವೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಗ್ರಾಮಗಳು ಸ್ವಾವಲಂಬನೆ ಆಗದಿದ್ದರೆ ದೇಶವು ಪ್ರಗತಿ ಆಗುವುದಿಲ್ಲ. ಭಾರತ ಹಳ್ಳಿಗಳ ದೇಶ, ಹಳ್ಳಿಗಳ ಉದ್ಧಾರ ಆಗಬೇಕೆಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಕರ್ನಾಟಕ ರಾಜ್ಯದಲ್ಲಿ 6,000 ಗ್ರಾಮ ಪಂಚಾಯಿತಿಗಳು ಇವೆ. ಗ್ರಾಮ ಪಂಚಾಯಿತಿಗಳಿಗೆ ಗಾಂಧೀಜಿ ಹೆಸರು ಇಡಲು ತೀರ್ಮಾನ ಮಾಡಿದ್ದೇವೆ. ಗ್ರಾಮಸ್ವರಾಜ್ಯ ಕಲ್ಪನೆಯ ಕೊಟ್ಟಿದ್ದು ಮಹಾತ್ಮ ಗಾಂಧೀಜಿ ಅವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತ ಬಲಿದಾನವನ್ನು ಸ್ಮರಿಸಬೇಕು. ಗಾಂಧೀಜಿಯವರು ಸ್ವಾತಂತ್ರ್ಯ ಚಳುವಳಿಯ ನೇತೃತ್ವವನ್ನು ವಹಿಸಿದ್ದರು. ಈ ದಿನವನ್ನು ದೇಶದ ಜನರು ಸ್ಮರಿಸಿಕೊಳ್ಳುತ್ತಾರೆ. ಅವರು ಸಮಾಜಕ್ಕೆ ಮಾಡಿರುವ ಸೇವೆಯನ್ನು ಸ್ಮರಿಸಿಕೊಳ್ಳಬೇಕು, ಗಾಂಧೀಜಿ ಅವರು ಎಲ್ಲಾ ತ್ಯಾಗ ಮಾಡಿದರು ಜೈಲಿಗೆ ಸಹ ಹೋಗಿದ್ದರು. ಮಹಾತ್ಮ ಗಾಂಧೀಜಿಯವರು ಇಡೀ ದೇಶವನ್ನು ಸುತ್ತಿದ್ದರು.ಕಾಂಗ್ರೆಸ್ ಪಕ್ಷ ಗಾಂಧೀಜಿ ನೇತೃತ್ವದಲ್ಲಿ ಹೋರಾಟ ಮಾಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.








