ಮೈಸೂರು : ಮೈಸೂರಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಡ್ರಗ್ಸ್ ತಯಾರಿಕೆ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಫ್ಯಾಕ್ಟರಿಯಲ್ಲಿ ಪೊಲೀಸರು ಶೋಧ ಮುಂದುವರಿಸಿದ್ದು, ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಶ್ವಾನ ದಳದಿಂದಲೂ ಕೂಡ ಪರಿಶೀಲನೆ ನಡೆಯುತ್ತಿದೆ. ಆರು ಪ್ರತ್ಯೇಕ ಶ್ವಾನದಳ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ.
ಪೊಲೀಸರು ಸ್ಥಳದಲ್ಲಿ ಪರಿಶೀಲನೆ ಮಾಡಿದ್ದು ಇಂಚಿಂಚು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಈ ಸ್ಥಳದಲ್ಲಿ ಡ್ರಗ್ಸ್ ತಯಾರಿಕೆ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಮಾದಕ ದ್ರವ್ಯ ಪತ್ತೆಗಾಗಿ ಆರು ಶ್ವಾನ ಬಳಸಿ ಪರಿಶೀಲನೆ ಮಾಡುತ್ತಿದ್ದಾರೆ. ಪ್ರತಿಯೊಂದು ಫ್ಯಾಕ್ಟರಿಯಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ಅನುಮಾನಾಸ್ಪದ ವಸ್ತುಗಳನ್ನು ಶ್ವಾನಗಳ ಮೂಲಕ ಪರಿಶೀಲಿಸುತ್ತಿದ್ದಾರೆ ಯೋಧ, ಭೈರ, ದತ್ತ, ಲಿಯೋ, ಸಿಂಬ ಹಾಗೂ ಗರುಡ ಶ್ವಾನಗಳಿಂದ ಪರಿಶೀಲನೆ ನಡೆಯುತ್ತಿದೆ.








