ಬೆಂಗಳೂರು: ಕೇಂದ್ರ ಸರ್ಕಾರವು ಅನುದಾನ ಕೊಡದೇ ಕನ್ನಡಿಗರಿಗೆ ದ್ರೋಹ ಮಾಡಿದೆ. ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರ ವಿರುದ್ಧ ಮತ್ಸರ ಕಾರುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.
ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಕಾಂಗ್ರೆಸ್ ಪಕ್ಷವು, 5ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಪಾಲು ಕಡಿಮೆ ಮಾಡಿದ ಕಾರಣಕ್ಕೆ ಆಯೋಗವು 11,495 ಕೋಟಿ ರೂ.ನಷ್ಟು ಹೆಚ್ಚುವರಿ ಅನುದಾನ (5,495 ಕೋಟಿ ವಿಶೇಷ ಅನುದಾನ, ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆಗೆ 3,000 ಕೋಟಿ) ನೀಡಲು ಶಿಫಾರಸ್ಸು ನೀಡಿತ್ತು. ಆದರೆ ಬಿಜೆಪಿ ಸರ್ಕಾರ ಇದನ್ನು ಕೊಡದೇ ದ್ರೋಹ ಬಗೆದಿದೆ ಎಂದು ಗುಡುಗಿದೆ.
ಬಿಜೆಪಿಯ ಅನ್ಯಾಯ ಇಷ್ಟಕ್ಕೇ ನಿಲ್ಲಲಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಕರ್ನಾಟಕದ ಪಾಲು 50%ಗಿಂತ ಹೆಚ್ಚಾಗಿದೆ. ಕೇಂದ್ರದ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದ ಕಾರಣ ಕರ್ನಾಟಕಕ್ಕೆ 23,402 ಕೋಟಿ ಹೆಚ್ಚಿನ ಹೊರೆ ಬಿದ್ದಿದೆ ಎಂಬುದಾಗಿ ತಿಳಿಸಿದೆ.
ಜಲಜೀವನ್ ಮಿಷನ್ ಯೋಜನೆಯಲ್ಲಿ 13 ಸಾವಿರ ಕೋಟಿ ರೂ. ಬಾಕಿ ಉಳಿಸಿಕೊಂಡಿರುವ ಕೇಂದ್ರ ಸರ್ಕಾರ, ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ 1,802 ಕೋಟಿ ರೂ. ಹಾಗೂ ಆರೋಗ್ಯ ಕ್ಷೇತ್ರದಲ್ಲಿ 874 ಕೋಟಿ ರೂ. ಅನುದಾನ ಕಡಿಮೆಯಾಗಿದೆ. ಇನ್ನು ಭದ್ರ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನವೂ ಬಂದಿಲ್ಲ ಎಂದಿದೆ.
ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಕರ್ನಾಟಕದ ಬಿಜೆಪಿ ನಾಯಕರು ಬಾಯಿ ಬಿಡದೆ, ತಮ್ಮ ಹೇಡಿತನದ ಪ್ರಮಾವಧಿಯನ್ನು ಪ್ರದರ್ಶಿಸುತ್ತಿದ್ದಾರೆ ಎಂಬುದಾಗಿ ತಿಳಿಸಿದೆ.
ಕೇಂದ್ರ ಬಿಜೆಪಿ ಸರ್ಕಾರ ಕನ್ನಡಿಗರ ವಿರುದ್ಧ ಮತ್ಸರ ಕಾರುತ್ತಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ?
15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಪಾಲು ಕಡಿಮೆ ಮಾಡಿದ ಕಾರಣಕ್ಕೆ ಆಯೋಗವು 11,495 ಕೋಟಿ ರೂ.ನಷ್ಟು ಹೆಚ್ಚುವರಿ ಅನುದಾನ (5,495 ಕೋಟಿ ವಿಶೇಷ ಅನುದಾನ, ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆಗೆ 3,000 ಕೋಟಿ) ನೀಡಲು… pic.twitter.com/dNuVaWTdR2
— Karnataka Congress (@INCKarnataka) January 30, 2026
ಸೋಷಿಯಲ್ ಮೀಡಿಯಾದಲ್ಲಿ ಇಂಡಿಗೋ ಏರ್ ಹೋಸ್ಟೆಸ್-ಪೈಲಟ್ ಲವ್ ಸ್ಟೋರಿ ವೀಡಿಯೋ ಪುಲ್ ವೈರಲ್
ಗಣರಾಜ್ಯೋತ್ಸವದ ಪ್ರಯುಕ್ತ 2,000ಕ್ಕೂ ಹೆಚ್ಚು ಜಾವಾ, ಯೆಜ್ಡಿ, ಬಿಎಸ್‌ಎ ಬೈಕ್ ಸವಾರರಿಂದ ದೇಶಾದ್ಯಂತ ರೈಡ್








