ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದಂತ ಘಟನೆ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನದ ಬಳಿಕ ಜೈಲುಪಾಲಾಗಿದ್ದರು. ಅವರಿಗೆ ಇಂದು ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಬ್ಯಾನರ್ ತೆರವಿನ ಸಂಬಂಧ ದೂರವಾಣಿ ಕರೆ ಮಾಡಿದ್ದಂತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದರು. ಈ ಸಂಬಂಧ ಪೌರಾಯುಕ್ತೆ ಅವರ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಕೇರಳದ ಗಡಿಯಲ್ಲಿ ರಾಜೀವ್ ಗೌಡ ಅವರನ್ನು ಬಂಧಿಸಿದ್ದರು. ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
ಇಂದು ಅವರು ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಶಿಡ್ಲಘಟ್ಟ ಜೆಎಂಎಫ್ ಸಿ ಕೋರ್ಟ್ ವಿಚಾರಣೆ ನಡೆಸಿತು. ರಾಜೀವ್ ಗೌಡ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಅನುದಾನ ಕೊಡದೇ ಅನ್ಯಾಯ: ಕೇಂದ್ರದ ಬಿಜೆಪಿ ಸರ್ಕಾರದಿಂದ ಕನ್ನಡಿಗರಿಗೆ ದ್ರೋಹ – ಕಾಂಗ್ರೆಸ್ ಕಿಡಿ
BREAKING: ರಾಜ್ಯದ ಸಾರಿಗೆ ಬಸ್ಸು, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನ ಸೇವನೆ ಪ್ರಚೋದನೆಯ ಜಾಹೀರಾತು ನಿಷೇಧ








