ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ, ಉದ್ಯಮಿ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ಮಾಡಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಇಂದು ಕನಕಪುರದಲ್ಲಿ ಸುದ್ದಿಗಾರರೊಂದಿಗೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದಂತ ಅವರು, ಈ ಬಗ್ಗೆ ಸರ್ಕಾರದಿಂದಲೇ ಉನ್ನತ ಮಟ್ಟದ ತನಿಖೆ ಮಾಡಿಸುವುದಾಗಿ ತಿಳಿಸಿದರು.
ಎದೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ: ಬೆಂಗಳೂರು ನಗರ ಪೊಲೀಸ್ ಆಯುಕ್ತರು
ಬೆಂಗಳೂರು: ಕಾಲ್ಫಿಡೆಂಟ್ ಕಂಪನಿಯ ಮುಖ್ಯಸ್ಥ, ಉದ್ಯಮಿ ಸಿ.ಜೆ ರಾಯ್ ಅವರು ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದು ಮೇಲ್ನೋಟಕ್ಕೆ ಕಂಡು ಬಂದಿದೆ. ಆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ವರು, ಕಳೆದ ಮೂರು ದಿನಗಳಿಂದ ಕೇರಳ ಐಟಿ ಅಧಿಕಾರಿಗಳ ತಂಡವು ಸಿ.ಜೆ ರಾಯ್ ನಿವಾಸದ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಇಂದು ಮಧ್ಯಾಹ್ನ 3 ಗಂಟೆಯಿಂದ 3.15ರ ಸುಮಾರಿಗೆ ಈ ಘಟನೆ ನಡೆದಿದೆ ಎಂದರು.
ಕಾನ್ಫಿಡೆಂಟ್ ಗ್ರೂಪ್ ನಿರ್ದೇಶಕರು ಈ ಘಟನೆ ಸಂಬಂಧ ದೂರು ನೀಡಿದ್ದಾರೆ. ಅವರ ದೂರು ಆಧರಿಸಿ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಸಿ.ಜೆ ರಾಯ್ ಶೂಟ್ ಮಾಡಿಕೊಂಡ ಗನ್ ಯಾವುದು ಸೇರಿದಂತೆ ಇತರೆ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ED ಅಧಿಕಾರಿಗಳಿಂದ 40,000 ಕೋಟಿ ವಂಚನೆ ಕೇಸಲ್ಲಿ ರಿಲಯನ್ಸ್ ಕಮ್ಯುನಿಕೇಷನ್ ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ








