ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ಈ ಸಂಬಂಧ ಫೆಬ್ರವರಿ.5ರಂದು ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯನ್ನು ನಡೆಸಲಿದ್ದಾರೆ.
ಫೆಬ್ರವರಿ.5ರಂದು ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯನ್ನು ನಡಸಲಿದ್ದಾರೆ. ಈ ಸಭೆಯಲ್ಲಿ ಬಜೆಟ್ ಪೂರ್ವ ವಿಷಯಗಳ ಬಗ್ಗೆ ಚರ್ಚೆಯನ್ನು ನಡೆಸಲಿರುವಂತ ಅವರು, ಯಾವ ಕ್ಷೇತ್ರಕ್ಕೆ ಎಷ್ಟು ನೀಡುವುದು ಸೇರಿದಂತೆ ವಿವಿಧ ವಿಚಾರಗಳನ್ನು ಚರ್ಚಿಸಲಿದ್ದಾರೆ.
ಈ ಪೂರ್ವಭಾವಿ ಸಭೆಯ ನಂತ್ರ ಸಿಎಂ ಸಿದ್ಧರಾಮಯ್ಯ ಅವರು ಎಲ್ಲಾ ಇಲಾಖೆಯ ಮುಖ್ಯಸ್ಥರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ. ಅಲ್ಲಿನ ಮಾಹಿತಿಗಳನ್ನು ಆಧರಿಸಿ, ಬಜೆಟ್ ಮಂಡನೆಯನ್ನು ಅಂತಿಮಗೊಳಿಸಲಿದ್ದಾರೆ.
ಅಂದಹಾಗೇ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಈ ಹಿಂದೆ 16 ಬಾರಿ ಬಜೆಟ್ ಮಂಡಿಸಿದ್ದಾರೆ. ಇದೀಗ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡನೆಗೆ ಸಿದ್ಧಗೊಂಡಿದ್ದಾರೆ.








