ಕರ್ನಾಟಕ ಸರ್ಕಾರವು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಕಾಗದರಹಿತ ನೋಂದಣಿ ಪದ್ಧತಿಯನ್ನು ಹೊಸದಾಗಿ ಪರಿಚಯಿಸಲಿದೆ. ಕಾಗದರಹಿತ ನೋಂದಣಿಯನ್ನು ಯಶಸ್ವಿಯಾಗಿ ಕೈಗೊಳ್ಳಲು ಸುಧಾರಿತ ಕಾವೇರಿ-2 ತಂತ್ರಾಂಶದ ಬಳಕೆ ಕುರಿತು ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಜನವರಿ, 31 ರಂದು ಮಧ್ಯಾಹ್ನ 12.30 ಗಂಟೆಯಿಂದ 1.30 ಗಂಟೆವರೆಗೆ ಪೊನ್ನಂಪೇಟೆ ಉಪ ನೋಂದಣಾಧಿಕಾರಿ ಕಚೇರಿ ಮತ್ತು ಸಂಜೆ 4 ಗಂಟೆಯಿಂದ 5 ಗಂಟೆಯವರೆಗೆ ವಿರಾಜಪೇಟೆ ತಾಲ್ಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ, ಫೆಬ್ರವರಿ, 02 ರಂದು ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಕುಶಾಲನಗರ ಉಪ ನೋಂದಣಾಧಿಕಾರಿ ಕಚೇರಿ ಮತ್ತು ಸಂಜೆ 4.30 ರಿಂದ 5.30 ರವರೆಗೆ ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಫೆಬ್ರವರಿ, 03 ರಂದು ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತರಬೇತಿ ಕಾರ್ಯಕ್ರಮ ನಡೆಯಲಿದೆ ಎಂದು ಮಡಿಕೇರಿ ಉಪ ನೋಂದಣಿ ಅಧಿಕಾರಿ ಅವರು ತಿಳಿಸಿದ್ದಾರೆ.








