ತೆಲಂಗಾಣ : ತೆಲಂಗಾಣದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತೆಲಂಗಾಣದ ಬೋಡುಪ್ಪಲ್ ಪ್ರದೇಶದ ಹರಿತಹಾರಂ ಕಾಲೋನಿಯ ಪಿ. ಸುರೇಂದರ್ ರೆಡ್ಡಿ, ವಿಜಯ, ಚೇತನ ರೆಡ್ಡಿ ಚೆರ್ಲಪಲ್ಲಿ-ಘಟ್ಕೇಸರ್ ರೈಲ್ವೆ ಹಳಿಯಲ್ಲಿ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮೃತಪಟ್ಟಿರುವುದನ್ನು ಕಂಡ ಸ್ಥಳೀಯರು ತಕ್ಷಣ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು, ಆತ್ಮಹತ್ಯೆ ಮಾಡಿಕೊಂಡವರನ್ನು ಒಂದೇ ಕುಟುಂಬದ ಮೂವರು ಸದಸ್ಯರು ಎಂದು ಗುರುತಿಸಿದ್ದಾರೆ. ನಂತರ, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವರ ಸಾವುಗಳು ಆರ್ಥಿಕ ತೊಂದರೆಯಿಂದಾಗಿವೆಯೇ ಅಥವಾ ಕೌಟುಂಬಿಕ ಕಲಹದಿಂದಾಗಿವೆಯೇ ಎಂದು ತನಿಖೆ ನಡೆಸುತ್ತಿದ್ದಾರೆ.
ಹರಿತಹಾರ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಪ್ರದೇಶ ಶೋಕದಲ್ಲಿ ಮುಳುಗಿದೆ. ತಂದೆ, ತಾಯಿ ಮತ್ತು ಮಗ ಎಲ್ಲರೂ ಒಂದೇ ಸಮಯದಲ್ಲಿ ಸಾವನ್ನಪ್ಪಿದ್ದರಿಂದ ಸಂಬಂಧಿಕರು ಮತ್ತು ಸ್ನೇಹಿತರು ಕಣ್ಣೀರು ಹಾಕುತ್ತಿದ್ದಾರೆ.








