ಬೆಂಗಳೂರು : 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಪಿ ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜನನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕೆಪಿ ಅಗ್ರಹಾರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜನನ್ನು ಲಂಚ ಪಡೆದ ಪ್ರಕರಣದಲ್ಲಿ ಸಸ್ಪೆಂಡ್ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಇನ್ಸ್ಪೆಕ್ಟರ್ ನನ್ನು ಸಸ್ಪೆಂಡ್ ಮಾಡುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.
ಅಲ್ಲದೆ ವಿವಿಧ ಪ್ರಕರಣಗಳ ಸಂಬಂಧ ನೂರಕ್ಕೂ ಅಧಿಕ ಪೊಲೀಸ್ ಹೆಸರನ್ನು ಅಮಾನತು ಮಾಡಲಾಗಿದೆ. ಭ್ರಷ್ಟಾಚಾರದಲ್ಲಿ ಭಾಗಿಯಾಗದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಆದರೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಅವರಿಗೂ ಇರಬೇಕು ಪದೇ ಪದೇ ಎಂತಹ ಘಟನೆ ನಡೆದಾಗ ಇಲಾಖೆಗೆ ಮುಜುಗರ ಆಗುತ್ತದೆ. ಸರ್ಕಾರ ಹಾಗೂ ವೈಯಕ್ತಿಕವಾಗಿ ನಮಗೂ ಮುಜುಗರವಾಗುತ್ತದೆ. ಮತ್ತೆ ಇಂತಹ ಘಟನೆ ಆಗಬಾರದು ಎಂದು ಸೂಚನೆ ಕೊಟ್ಟಿದ್ದೇನೆ ಎಂದರು.








