ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.
ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.
ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದ ಅವರು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕೈಗೊಳ್ಳಲಾಗುತ್ತಿರುವ ವಿವಿಧ ವೃತ್ತಿ ತರಬೇತಿಗಳ ಪ್ರಗತಿ, ಗುರಿ ಸಾಧನೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಗೂ ಅವರು ಭೇಟಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಹರಿಪ್ರಸಾದ್ ಹಾಗೂ ಜಿಲ್ಲಾ ವ್ಯವಸ್ಥಾಪಕರಾದ ಶಕುಂತಲಾ ಹಾಗೂ ಬೆಳ್ತಂಗಡಿ ತಾಲೂಕಿನ ಕಾರ್ಯಕ್ರಮ ವ್ಯವಸ್ಥಾಪಕರಾದ ಜಯಾನಂದ ಉಪಸ್ಥಿತರಿದ್ದರು.
ಅನಂತರ ಬೆಳ್ತಂಗಡಿ ತಾಲೂಕಿನ ಉಜಿರೆಯ ಸಂಜೀವಿನಿ ಸಂಘದವರು ನಡೆಸುತ್ತಿರುವ ‘ಅಕ್ಕ ಹೋಟೆಲ್’ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾತ್ಯಾಯಿನಿ ದೇವಿ ಅವರು, ಮಾರುಕಟ್ಟೆ ವ್ಯವಸ್ಥೆಯ ಅಭಿವೃದ್ಧಿ, ನಿರ್ವಹಣೆ ಹಾಗೂ ವಿಸ್ತರಣೆಯ ಕುರಿತು ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್








