ಬೆಂಗಳೂರು: ವಿಜಯ ಕರ್ನಾಟಕ ಉಪ ಸಂಪಾದಕರಾಗಿ ಕಲಬುರ್ಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭುಲಿಂಗ ನೀಲೂರೆ(52) ಅವರು ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.
ಉಷಾಕಿರಣ, ವಿಜಯವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸದ್ಯ ವಿಜಯಕರ್ನಾಟಕ ಪತ್ರಿಕೆಯಲ್ಲಿದ್ದರು. ಕಲಬುರ್ಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.
ಕೆಯುಡಬ್ಲೂೃಜೆ ಸಂತಾಪ:
ಕ್ರೀಯಾಶೀಲ ಪತ್ರಕರ್ತರಾಗಿದ್ದ ಪ್ರಭುಲಿಂಗ ನೀಲೂರೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಸಾಹಿತಿ, ಸಂಘಟಕನನ್ನು ಕಳೆದುಕೊಂಡಂತಾಗಿದೆ ಎಂದು ಶೋಕಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಗಡೂರು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.
ವಿಜಯಕರ್ನಾಟಕ, ವಿಜಯವಾಣಿ, ಉಷಾಕಿರಣ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಕಲಬುರ್ಗಿಯ ಪ್ರಭುದೇವ ನೀಲೂರೆ (52)ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ. ಕ್ರೀಯಾಶೀಲ ಪತ್ರಕರ್ತ ನೀಲೂರೆ ನಿಧನ, ನೋವಿನ ಸಂಗತಿ.ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ. pic.twitter.com/rlDwaRXMlN
— Karnataka Union of Working Journalists (R) (@KUWJ_R) January 31, 2026
ಜಮೀನಿನ ವಿಚಾರಕ್ಕೆ ಆರಂಭವಾದ ದಾಯಾದಿಗಳ ಕಲಹ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್








