ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿದೆ. ಆ ಮೂಲಕ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಹಿಂದಿನ ನಿಖರ ಕಾರಣ ಬಹಿರಂಗಕ್ಕೆ ಮುಂದಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ತನಿಖೆಗೆ ರಚಿಸಿ ಸರ್ಕಾರ ಆದೇಶಿಸಿದೆ.
ವಂಶಿಕೃಷ್ಣ ನೇತೃತ್ವದ ಎಸ್ಐಟಿ ತಂಡದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಅವರು ಇರಲಿದ್ದಾರೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಅಂದಹಾಗೇ ಉದ್ಯಮಿ ಸಿ.ಜೆ ರಾಯ್ ಅವರು ನಿನ್ನೇ ತಮ್ಮ ಮನೆಯಲ್ಲಿ ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಂತ ವೇಳೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಕಾಡುತ್ತಿದ್ದವು. ಈ ಹಿನ್ನಲೆಯಲ್ಲಿ ಸರ್ಕಾರ ಎಸ್ಐಟಿ ನೇತೃತ್ವದಲ್ಲಿ ತನಿಖೆಗೆ ವಹಿಸಿ ಆದೇಶಿಸಿದೆ.
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್








