ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯೆ ನೀಡಿದ್ದು ಎಸ್ಐಟಿ ಇಂದ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಆಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತಣಿಕೆಗಾಗಿ ಎಸ್ಐಟಿ ರಚನೆ ಮಾಡಲಾಗಿದೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಸಹ ಇರುತ್ತಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅವರಿಗೆ ಏನಾದರೂ ಸಮಸ್ಯೆ ಇತ್ತ?ಎನ್ನುವುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುತ್ತೆ ಎಂದರು.








