Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ: ಸಿಎಂ ಸಿದ್ದರಾಮಯ್ಯ ರಾಜೀನಾಮೆ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ಬಸ್ ಪ್ರಯಾಣಕ್ಕೂ ಮುನ್ನ ಈ 7 ಕೆಲಸ ಮಿಸ್ ಮಾಡಬೇಡಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 20 ವರ್ಷಗಳಿಂದ ತಲೆದೊರಿರುವ ಸಮಸ್ಯೆಗೆ ಶೀಘ್ರದಲ್ಲೆ ಮುಕ್ತಿ: ಮದ್ದೂರು ಶಾಸಕ ಕೆ.ಎಂ.ಉದಯ್
KARNATAKA

20 ವರ್ಷಗಳಿಂದ ತಲೆದೊರಿರುವ ಸಮಸ್ಯೆಗೆ ಶೀಘ್ರದಲ್ಲೆ ಮುಕ್ತಿ: ಮದ್ದೂರು ಶಾಸಕ ಕೆ.ಎಂ.ಉದಯ್

By ವಸಂತ ಬಿ ಈಶ್ವರಗೆರೆ

ಮಂಡ್ಯ : ಕಳೆದ 20 ವರ್ಷಗಳಿಂದ ತಲೆದೊರಿರುವ ಆತಗೂರು ಹೋಬಳಿಯ ರೀ ಸರ್ವೆ ಸಮಸ್ಯೆಗೆ ಇನ್ನು ಕೆಲ ದಿನಗಳಲ್ಲೇ ಮುಕ್ತಿ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಭರವಸೆ ನೀಡಿದರು.

ಮದ್ದೂರು ತಾಲೂಕಿನ ಈಡಿಗರದೊಡ್ಡಿ, ಚಾಕನಕೆರೆ ಹಾಗೂ ನವಿಲೆ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇತುವೆ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಆತಗೂರು ಹೋಬಳಿಯನ್ನು ರೀ ಸರ್ವೆ ಮಾಡಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಿಂದ ರೀ ಸರ್ವೆ ಪ್ರಕ್ರಿಯೆ ಅರ್ಧಕ್ಕೆ ನಿಂತು ಹೋಯಿತು. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಕಳೆದ 15 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿಗಳು ಸಹ ರೈತರ ಸಮಸ್ಯೆಯನ್ನು ಬಗೆಹರಿಸಲು ವಿಫಲರಾಗಿದ್ದಾರೆ.

ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಪ್ರತಿ ಗ್ರಾಮಗಳಲ್ಲಿ ಜನ ಸಂಪರ್ಕ ಸಭೆ ನಡೆಸಿದ ಸಂದರ್ಭದಲ್ಲಿ ಎಲ್ಲಾ ಗ್ರಾಮಗಳಲ್ಲೂ ರೀ ಸರ್ವೆ ಸಮಸ್ಯೆಯ ಬಗ್ಗೆ ಹೆಚ್ಚು ದೂರುಗಳು ಕೇಳಿ ಬಂದಿದ್ದವು. ಹೀಗಾಗಿ ಕಳೆದ ಎರಡು ವರ್ಷಗಳಿಂದ ನಡೆದ ಸದನದ ಕಲಾಪದ ವೇಳೆ ಈ ಸಂಬಂಧ ಸಚಿವರ ಗಮನ ಸೆಳೆಯಲಾಗಿತ್ತು. ಹಾಗೂ ಗುರುವಾರ ಕೂಡ ಈ ಬಗ್ಗೆ ಚರ್ಚೆ ನಡೆಸಿದ್ದು, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇನ್ನು ಕೆಲ ದಿನಗಳಲ್ಲೇ ಈ ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.

ಅಷ್ಟೇ ಅಲ್ಲದೇ ನಗರದ ತಾಲೂಕು ಕ್ರೀಡಾoಗಣದ ಮೇಲ್ದರ್ಜೆಗೆ ಏರಿಸುವ ಬಗ್ಗೆಯೂ ಸದನದಲ್ಲಿ ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದಿದ್ದೇನೆ, ಈ ಬಗ್ಗೆ ಸಂಬಂಧಪಟ್ಟ ಸಚಿವರುಗಳಿಂದ ಸಕಾರಾತ್ಮಕ ಉತ್ತರ ಸಿಕ್ಕಿದೆ ಶೀಘ್ರವಾಗಿ ನಗರದಲ್ಲಿ ಹೈ ಟೆಕ್ ಕ್ರೀಡಾಂಗಣಕ್ಕೆ ಬಜೆಟ್ ನಲ್ಲಿ ಅನುದಾನ ಬಿಡುಗಡೆಯಾಗುವ ನಿರೀಕ್ಷೆಗಳಿವೆ ಎಂದು ತಿಳಿಸಿದರು.

ಇನ್ನು ಬೇಸಿಗೆಯು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕೂಡ ಸೂಕ್ತ ಮುಂಜಾಗ್ರತಾ ಕ್ತಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಇದೇ ವೇಳೆ ಮನ್ ಮುಲ್ ನಿರ್ದೇಶಕ ಹರೀಶ್ ಬಾಬು,
ಮುಖಂಡರಾದ ಕೆಸ್ತೂರು ದಾಸೇಗೌಡ, ನಾಗೇಗೌಡ, ಶಂಕರಲಿಂಗೇಗೌಡ, ದುಂಡನಹಳ್ಳಿ ಯೋಗೇಶ್, ನವೀನ್ ಕುಮಾರ್, ಕೃಷ್ಣ, ಪ್ರಸಾದ್, ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜ್, ಕೆಆರ್ಐಡಿಎಲ್ ಇಂಜಿನಿಯರ್ ರಾಕೇಶ್, ಪಿಡಿಓ ಮಧುಸೂದನ್ ಸೇರಿದಂತೆ ಹಲವರು ಹಾಜರಿದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಡಯಾಲಿಸಿಸ್ ರೋಗಿಗಳಿಗೆ ಬಿಗ್ ಶಾಕ್: ರಾಜ್ಯ ಸರ್ಕಾರದಿಂದ ಇನ್ ಹೌಸ್ ಮಾದರಿಯ ಕೇಂದ್ರಗಳ ಡಯಾಲಿಸಿಸ್ ಸೈಕಲ್ ದರ ಹೆಚ್ಚಳ

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

2 Mins Read

ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ: ಸಿಎಂ ಸಿದ್ದರಾಮಯ್ಯ ರಾಜೀನಾಮೆ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

1 Min Read

ಸಾರ್ವಜನಿಕರೇ ಗಮನಿಸಿ : ಬಸ್ ಪ್ರಯಾಣಕ್ಕೂ ಮುನ್ನ ಈ 7 ಕೆಲಸ ಮಿಸ್ ಮಾಡಬೇಡಿ.!

2 Mins Read
Recent News

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ: ಸಿಎಂ ಸಿದ್ದರಾಮಯ್ಯ ರಾಜೀನಾಮೆ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ಬಸ್ ಪ್ರಯಾಣಕ್ಕೂ ಮುನ್ನ ಈ 7 ಕೆಲಸ ಮಿಸ್ ಮಾಡಬೇಡಿ.!

BREAKING : ನಾಳೆ ಬೆಳಿಗ್ಗೆ ರಾಜ್ಯಪಾಲರ ಭೇಟಿ ಬಳಿಕ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | CM Siddaramaiah

State News
KARNATAKA

BIG NEWS : ರಾಜ್ಯದಲ್ಲಿ ಶೀಘ್ರವೇ ಚುನಾವಣೆ ಬರಲಿದೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ!

By ಸುರೇಶ್‌ KARNATAKA 2 Mins Read

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ ಎಂಬ ಚರ್ಚೆಗಳು…

ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ: ಸಿಎಂ ಸಿದ್ದರಾಮಯ್ಯ ರಾಜೀನಾಮೆ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಸಾರ್ವಜನಿಕರೇ ಗಮನಿಸಿ : ಬಸ್ ಪ್ರಯಾಣಕ್ಕೂ ಮುನ್ನ ಈ 7 ಕೆಲಸ ಮಿಸ್ ಮಾಡಬೇಡಿ.!

BREAKING : ನಾಳೆ ಬೆಳಿಗ್ಗೆ ರಾಜ್ಯಪಾಲರ ಭೇಟಿ ಬಳಿಕ, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | CM Siddaramaiah

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.