ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸೋದಕ್ಕೆ ವಿಶೇಷ ತನಿಖಾ ತಂಡವನ್ನು ರಚಿಸಿ ಸರ್ಕಾರ ಆದೇಶಿಸಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್ ಬಿ ಎಸಿಪಿ ರಾಮಚಂದ್ರ, ಅಶೋಕ ನಗರ ಠಾಣೆ ಇನ್ಸ್ ಪೆಕ್ಟರ್ ರವಿ ಒಳಗೊಂಡ ಎಸ್ಐಟಿ ತಂಡವನ್ನು ರಚಿಸಲಾಗಿದೆ.
ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಆತ್ಮಹತ್ಯೆ ವೇಳೆಯಲ್ಲೇ ಐಟಿ ಅಧಿಕಾರಿಗಳ ತಂಡವು ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಮನೆಯಲ್ಲಿ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದರು. ಈ ಎಲ್ಲದರ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ತಂಡವನ್ನು ತನಿಖೆಗಾಗಿ ರಚನೆ ಮಾಡಿದೆ.
ಒಂದು ವರ್ಷದೊಳಗೆ ಮಂಡ್ಯದ ಕೊಪ್ಪ ಹೋಬಳಿಯ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ: ಸಚಿವ ಎನ್.ಚಲುವರಾಯಸ್ವಾಮಿ
ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಈಗ ಮೆಟ್ರೋ ರೈಲಿನಲ್ಲಿ ಈ ಎಲ್ಲವೂ ನಿಷೇಧ, ತಪ್ಪಿದ್ರೆ ಕೇಸ್, ದಂಡ ಫಿಕ್ಸ್








