ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ಎಲ್ಲಾ ನಿರ್ಮಾಣ ಕಾರ್ಯಗಳು ಏಪ್ರಿಲ್ 30ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ಯೋಜನೆಯ ಒಟ್ಟಾರೆ ವೆಚ್ಚ ಸುಮಾರು 1,900 ಕೋಟಿ ರೂ. ಎಂದು ಅಂದಾಜಿಸಲಾಗಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಶನಿವಾರ ತಿಳಿಸಿದ್ದಾರೆ.
ಇಲ್ಲಿ ನಡೆದ ರಾಮ ಮಂದಿರ ನಿರ್ಮಾಣ ಸಮಿತಿಯ ಎರಡು ದಿನಗಳ ಸಭೆಯ ನಂತರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಮಿಶ್ರಾ, ಈ ಸ್ಥಳದಲ್ಲಿ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತಿರುವ ಲಾರ್ಸೆನ್ & ಟೂಬ್ರೊ (ಎಲ್ & ಟಿ) ಮತ್ತು ಟಾಟಾ ಕನ್ಸಲ್ಟೆನ್ಸಿ, ನಿರ್ಮಾಣ ಪೂರ್ಣಗೊಂಡ ನಂತರ ಏಪ್ರಿಲ್ 30ರೊಳಗೆ ದೇವಾಲಯ ಸಂಕೀರ್ಣದಿಂದ ನಿರ್ಗಮಿಸಲಿವೆ ಎಂದು ಹೇಳಿದರು.
ಎಲ್ಲಾ ದಾಖಲೆಗಳು ಮತ್ತು ಬಿಲ್ ಪಾವತಿ ಪ್ರಕ್ರಿಯೆಗಳನ್ನು ಅದೇ ದಿನಾಂಕದೊಳಗೆ ಪೂರ್ಣಗೊಳಿಸಲು ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮಿಶ್ರಾ ಮಾಹಿತಿ ನೀಡಿದರು.
ಭಾರತ ಕಂಡ ‘ಅತ್ಯುತ್ತಮ ಪ್ರಧಾನಿ’ ಯಾರು.? ಸಮೀಕ್ಷೆಯಲ್ಲಿ ಕುತೂಹಲಕಾರಿ ಸಂಗತಿ ಬಹಿರಂಗ!
ಸಾಗರದ ಮಾರಿಕಾಂಬ ಜಾತ್ರೆ ಹಿನ್ನಲೆ: ಫೆ.3ರಿಂದ 11ರವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ, ಮಾರ್ಗ ಬದಲಾವಣೆ








