ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯ ಭಾಗದಲ್ಲಿರುವ ಚೋರಘಾಟ್ ನಲ್ಲಿ ಕಳೆದ ಕೆಲವು ದಿನಗಳ ಹಿಂದೆ 400 ಕೋಟಿ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಈ ಒಂದು ದರೋಡೆಯ ಪ್ರಮುಖ ಆರೋಪಿ ಆಗಿರುವ ಕಿಶೋರ್ ಸಾಳ್ವೆ ನನ್ನು ಅರೆಸ್ಟ್ ಮಾಡಿದ್ದಾರೆ.
ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ.ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ.
ಪ್ರಕರಣ ಹಿನ್ನೆಲೆ
ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು ಎರಡು ಕಂಟೇನರ್‌ಗಳಲ್ಲಿದ್ದ ಸುಮಾರು 400 ಕೋಟಿ ರೂ. ಹಣವನ್ನು ದರೋಡೆ ಮಾಡಲಾಗಿತ್ತು ಎಂದು ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಇತ್ತೀಚೆಗೆ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ್ದರು. ಅದರೊಂದಿಗೆ, ಪ್ರಕರಣ ಬೆಳಕಿಗೆ ಬಂದಿದ್ದು ದೇಶದಾದ್ಯಂತ ಸಂಚಲನ ಮೂಡಿಸಿತ್ತು.
ದೂರುದಾರರ ಪ್ರಕಾರ, ದರೋಡೆಯಾದ ಹಣವು ಗುಜರಾತ್ ಮೂಲದ ಬಿಲ್ಡರ್ ಕಿಶೋರ್ ಸವಲಾ ಸೇಠ್ ಅವರಿಗೆ ಸೇರಿದ್ದು, ಅದರಲ್ಲಿ ರದ್ದಾದ 2,000 ರೂ. ಮುಖಬೆಲೆಯ ನೋಟುಗಳೂ ಇದ್ದವು ಎನ್ನಲಾಗಿದೆ.ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ.








