ಬೆಂಗಳೂರು : ಕರ್ನಾಟಕ ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ವಿವಾದಕ್ಕೆ ಸಂಬಂಧಪಟ್ಟಂತೆ ವಿವಾದ ಬಗೆಹರಿಸಲು ನ್ಯಾಯಾಧೀಕರಣ ರಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮನಾಥ ಹಾಗೂ ನ್ಯಾಯಮೂರ್ತಿ ಎನ್. ವಿ ಅಂಜಾರಿಯ ಪೀಠ ತೀರ್ಪು ನೀಡಿತ್ತು. ಒಂದು ತಿಂಗಳ ಒಳಗೆ ನ್ಯಾಯಾಧೀಕರಣ ರಚನೆ ಮಾಡುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿಲ್ಲ. ವಾದ ಮಂಡನೆ ವೇಳೆ ಕರ್ನಾಟಕ ಸರ್ಕಾರ ನ್ಯಾಯಾಧಿಕರಣ ರಚನೆ ಬೇಡ ಅಂತ ಹೇಳಿದ್ದು, ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಅಂತ ಹೇಳಿತ್ತು.
ಆದರೆ ತಮಿಳುನಾಡು ಸರ್ಕಾರ ನ್ಯಾಯಾಧೀಕರಣ ರಚಿಸುವಂತೆ ವಾದಿಸಿತ್ತು. ಆಗ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರದ ವಾದವನ್ನು ಪುರಸ್ಕರಿಸಿತ್ತು. ಕಳೆದ ಡಿಸೆಂಬರ್ ನಲ್ಲಿ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು. ಪೆನ್ನರ್ ನದಿಯ ಉಪನದಿಯಾದ ಮಾರ್ಕಂಡೇಯ ನದಿ, ಕೋಲಾರ ಜಿಲ್ಲೆಯ ಯರಗೋಳ ಬಳಿ ಡ್ಯಾಮ್ ನಿರ್ಮಿಸುತ್ತಿರುವುದನ್ನು ತಮಿಳುನಾಡು ಆಕ್ಷೇಪಿಸಿತ್ತು. ಡ್ಯಾಮ್ ನಿಂದ ನೀರಿನ ಕೊರತೆ ಆಗುತ್ತೆ ಎಂದು ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು.








