ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು, ಹುಬ್ಬಳ್ಳಿಯಲ್ಲಿ ಪತಿಯೊಬ್ಬ ಪತ್ನಿಯ ಕತ್ತು ಸೀಳಿ ಠಾಣೆಗೆ ಬಂದು ಶರಣಾಗಿದ್ದಾನೆ. ಕೊಲೆಗೆ ಕಾರಣ ಎಂದರೆ ಪತಿ ಸಾಲ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಪತ್ನಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ತೈಸೀನ್ ಶಿಗ್ಗಾವಿ (27) ಎಂದು ತಿಳಿದುಬಂದಿದ್ದು, ಪತಿ ಇರ್ಫಾನ್ ಕೊಲೆ ಆರೋಪಿಯಾಗಿದ್ದಾನೆ. ಆರೋಪಿ ಇರ್ಫಾನ್ ಕೆಲಸಕ್ಕೆ ಹೋಗಿದೆ ಮೈತುಂಬ ಸಾಲ ಮಾಡಿಕೊಂಡಿದ್ದ ಈ ವಿಚಾರ ಪತ್ನಿಗೆ ಗೊತ್ತಾಗಿದ್ದು ನೀ ಮಾಡಿರುವ ಸಾಲ ನೀನೆ ತೀರಿಸು ಸಾಲ ಯಾಕೆ ಮಾಡಿದೆ ಎಂದು ಪ್ರಶ್ನೆ ಮಾಡಿದ್ದಾಳೆ.
ಇದಕ್ಕೆ ಕುಪಿತಗೊಂಡ ಇರ್ಫಾನ್ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಬಳಿಕ ಹುಬ್ಬಳ್ಳಿಯ ಕೇಶ್ವಪುರ ಠಾಣೆಗೆ ಬಂದು ಶರಣಾಗಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಕೈಗೊಂಡಿದ್ದು ಘಟನಾ ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಕೊಲೆಯಾದ ಇರ್ಫಾನ್ ಪತ್ನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.








