ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಅನ್ಯ ಕೋಮಿನ ಅಪ್ರಾಪ್ತ ಬಾಲಕರಿಂದ ನೈತಿಕ ಪೊಲೀಸ್ ಗಿರಿ ನಡೆದಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ವಿಡಿಯೋ ಮಾಡಿಕೊಂಡು ಪ್ರಶ್ನೆ ಮಾಡಿದ್ದಾರೆ. ಯುವಕ ಯುವತಿಯನ್ನು ಅಪ್ರಾಪ್ತ ಪುಂಡರು ಪ್ರಶ್ನೆ ಮಾಡಿದ್ದಾರೆ.
ಶಿಡ್ಲಘಟ್ಟ ಮೂಲದ ವಿದ್ಯಾರ್ಥಿಗಳಿಬ್ಬರನ್ನು ಅಡ್ಡಗಟ್ಟಿ ಪುಂಡರು ಕಿರಿಕ್ ಮಾಡಿದ್ದಾರೆ. ತಾವಿಬ್ಬರು ಪರಸ್ಪರ ಸ್ನೇಹಿತರು, ಒಂದೇ ಊರಿನವರು ಹಾಗು ಕುಟುಂಬದ ಸ್ನೇಹಿತರು ಎಂದರು ಕೂಡ ನೈತಿಕ ಪೊಲೀಸ್ ಗಿರಿ ಮಾಡಿದ್ದಾರೆ. ರಸ್ತೆಯಲ್ಲಿ ಅಡ್ಡಗಟ್ಟಿ ಯುವಕ ಯುವತಿಗೆ ಕಿರುಕುಳ ನೀಡಿದ್ದಾರೆ.
ಅಪ್ರಾಪ್ತ ಪುಂಡರ ನೈತಿಕ ಪೊಲೀಸ್ ಗಿರಿಗೆ ಸಾರ್ವಜನಿಕರು ಅಕ್ರೋಶ ಹೊರಹಾಕಿದ್ದಾರೆ. ಅನ್ಯಕೋಮಿನ ಇಬ್ಬರು ಅಪ್ರಾಪ್ತ ಪುನರನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






