ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಬೀದಿನಳಿಗಳ ಹಾವಳಿ ಹೆಚ್ಚಾಗಿದ್ದು, ಇದೀಗ ಬೀದಿ ನಾಯಿಗಳು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ನಲ್ಲಿ ನುಗ್ಗಿದ್ದು, ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮತ್ತೊಂದು ಭಾರಿ ಅನಾಹುತ ಒಂದು ತಪ್ಪಿದೆ.
ಏರ್ಪೋರ್ಟ್ ರನ್ವೇನಲ್ಲಿ ಬೀದಿ ನಾಯಿಗಳು ಏಕಾಏಕಿ ನುಗ್ಗಿವೆ. ರನ್ ವೇ ನಲ್ಲಿ ದಿಕ್ಕಾಪಾಲಾಗಿ ಬೀದಿನಾಯಿಗಳು ಓಡಿವೆ. ಇದರಿಂದ ಸಿಬ್ಬಂದಿಗಳು ಕಕ್ಕಾಬಿಕ್ಕಿ ಯಾಗಿದ್ದಾರೆ. ನಾಯಿಗಳನ್ನು ಓಡಿಸಲು ಹರಸಾಹಸ ಪಟ್ಟಿದ್ದಾರೆ. ರನ್ ವೇ ನಲ್ಲಿ ನಾಯಿಗಳು ಓಡಾಡುತ್ತಿರುವುದರಿಂದ ಯಾವ ವಿಮಾನಗಳು ಲ್ಯಾಂಡ್ ಆಗಿಲ್ಲ ಆದ್ದರಿಂದ ಭಾರಿ ಅನಾಹುತ ತಪ್ಪಿದೆ.







