ಬಾಗಲಕೋಟೆ : ಪತ್ನಿಯ ಜೊತೆಗೆ ಸಲುಗೆಯಿಂದ ಇದ್ದಿದ್ದಕ್ಕೆ ಸ್ನೇಹಿತನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಅನೈತಿಕ ಸಂಬಂಧ ಎಂದು ಅನುಮಾನ ಬಂದು ಮಹಿಳೆಯ ಪತಿ ತನ್ನ ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಖಾನಾಪುರ ಎಸ್ ಕೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸೋಮಶೇಖರ ಎಂದು ತಿಳಿದುಬಂದಿದೆ. ಮಹಿಳೆಯ ಪತಿ ಹಾಗು ಸೋಮಶೇಖರ್ ಸ್ನೇಹಿತರಗಿದ್ದರು. ಇಂದು ಕಂಠಪೂರ್ತಿ ಕುಡಿಸಿ ಕಲ್ಲಿನಿಂದ ತಲೆ ಮತ್ತು ಮುಖ ಜಜ್ಜಿ ಕೊಲೆ ಮಾಡಿದ್ದಾನೆ. ಖಾನಾಪುರ ಎಸ್ಕೆ ಗ್ರಾಮದ ಮಾವಿನ ತೋಟದಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ.








