ಚಿತ್ರದುರ್ಗ : ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಖಾಸಗಿ ಶಾಲೆಯ ಶಿಕ್ಷಕ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಆರು ವಿದ್ಯಾರ್ಥಿನಿಯರನ್ನು ಕೋಣೆಗೆ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಬಂದಿದೆ. ಶಾಲಾ ಆಡಳಿತ ಸಮಿತಿಯಿಂದ ಈ ಕುರಿತು ಭರ್ಮಸಾಗರ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿ ಶಿಕ್ಷಕ ರಂಗಣ್ಣನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.








