ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಫೆಬ್ರವರಿ 4) ಉತ್ತರಿಸಲಿದ್ದಾರೆ.
ಬಜೆಟ್ ಅಧಿವೇಶನದಲ್ಲಿ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿಗಳು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಲೋಕಸಭೆಯಲ್ಲಿ ಸರ್ಕಾರ 18 ಗಂಟೆಗಳ ಕಾಲಾವಕಾಶ ನೀಡಿದೆ. ಮಾಜಿ ಸೇನಾ ಮುಖ್ಯಸ್ಥ ಎಂ.ಎಂ.ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಸದನವನ್ನು ಮಂಗಳವಾರ ಎರಡು ಬಾರಿ ಮುಂದೂಡಲಾಯಿತು.
“ಅಶಿಸ್ತಿನ ವರ್ತನೆ” ಗಾಗಿ ಎಂಟು ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ ನಂತರ ಲೋಕಸಭೆಯಲ್ಲಿ ವಿರೋಧ ಪಕ್ಷ ಮತ್ತು ಸರ್ಕಾರದ ನಡುವೆ ಬಿಕ್ಕಟ್ಟು ಕಂಡುಬಂದಿತು ಮತ್ತು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಬಗ್ಗೆ ತಮ್ಮ ಭಾಷಣವನ್ನು ಮುಂದುವರಿಸಲು ಸರ್ಕಾರ ಅವಕಾಶ ನೀಡಲಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.








