ವಿಜಯಪುರ : ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿ ಇರುವ ದತ್ತ ಸಕ್ಕರೆ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ದತ್ತ ಸಕ್ಕರೆ ಕಾರ್ಖಾನೆಯ ಗ್ಯಾಸ್ ಗೆ ಬೆಂಕಿ ಹೊತ್ತಿಕೊಂಡಿದ್ದು ಕಾರ್ಖಾನೆಯ ಯಂತ್ರೋಪಕರಣಗಳಿಗೂ ಕೂಡ ಬೆಂಕಿ ವ್ಯಾಪಿಸಿದೆ.
ಕಾರ್ಖಾನೆಯಲ್ಲಿ ಇದ್ದಂತಹ ಯಂತ್ರೋಪಕರಣಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುತ್ತಿದ್ದಾರೆ ಈ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








