ಅವಿನಾಶ್ ಆರ್ ಭೀಮಸಂದ್ರ
ಭಾರತೀಯ ಅಂಚೆ ಇಲಾಖೆಯು ಸ್ಪೀಡ್ ಪೋಸ್ಟ್, ಇತರೆ ಪತ್ರ ಹಾಗೂ ಪಾರ್ಸೆಲ್‌ಗಳ ಬುಕ್ಕಿಂಗ್ ಸೇವಾ ಅವಧಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ವಿಸ್ತರಿಸಲಾಗಿದೆ ಜಿಲ್ಲಾ ಅಂಚೆ ಕಚೇರಿಗಳಲ್ಲಿ ಕಚೇರಿ ಕಾರ್ಯ ಸಮಯ ಮುಕ್ತಾಯವಾಗುವ ಮೊದಲು ಕೊನೆಯ 30 ನಿಮಿಷಗಳವರೆಗೆ ಅಂಚೆ ವಸ್ತುಗಳನ್ನು ಬುಕ್ ಮಾಡುವ ಸೌಲಭ್ಯ ಒದಗಿಸಲಾಗುತ್ತಿದೆ.
ಈ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವ ದಿನಗಳಲ್ಲಿ ಇಲಾಖಾ ಅಂಚೆ ಕಚೇರಿಗಳ ನಿಗದಿತ ಕಾರ್ಯಾವಧಿ ಮುಕ್ತಾಯಕ್ಕೆ 30 ನಿಮಿಷಗಳವರೆಗೆ ಮುಂಚಿತವಾಗಿ ಸ್ಪೀಡ್ ಪೋಸ್ಟ್, ಪಾರ್ಸೆಲ್ ಹಾಗೂ ಅಂತರಾಷ್ಟಿçÃಯ ಸ್ಪೀಡ್ ಪೋಸ್ಟ್, ಪಾರ್ಸೆಲ್‌ಗಳನ್ನು ಬುಕ್ ಮಾಡಬಹುದಾಗಿದೆ.
ಇದರಿಂದ ಕಚೇರಿ ಸಮಯದ ಅಂತ್ಯದಲ್ಲಿ ಅಂಚೆ ಕಚೇರಿಗೆ ಬರುವ ಗ್ರಾಹಕರಿಗೂ ತಮ್ಮ ಅಂಚೆ ವಸ್ತುಗಳನ್ನು ಸುಲಭವಾಗಿ ಬುಕ್ ಮಾಡುವ ಅವಕಾಶ ದೊರೆಯುತ್ತದೆ. ಸೋಮವಾರದಿಂದ ಶುಕ್ರವಾರ ದವರೆಗೆ ಕೆಲಸದ ದಿನಗಳಿಗೆ ಮಾತ್ರ ಈ ಬುಕ್ಕಿಂಗ್ ಸಮಯದ ವಿಸ್ತರಣೆ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮನೆಯಲ್ಲಿಯೇ ಬುಕ್ಕಿಂಗ್ ಸೌಲಭ್ಯ : ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯ ಗ್ರಾಹಕ ಸ್ವಯಂ ಸೇವಾ ಪೋರ್ಟಲ್ (Customer Self Service Portal: https://app.indiapost.gov.in/customer-selfservice/login) ಲಭ್ಯವಿದ್ದು, ಇದರ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾö್ಯಕಿಂಗ್, ದೂರು ಸಲ್ಲಿಕೆ, ಸೇವೆಗಳ ವಿವರಗಳು ಹಾಗೂ ಇತರೆ ಅನೇಕ ಸೇವೆಗಳನ್ನು ಮನೆಯಲ್ಲಿಯೇ ಕುಳಿತು ಅನ್‌ಲೈನ್ ನಲ್ಲಿಯೇ ಪಡೆಯಬಹುದು.
ಡಾಕ್ ಸೇವಾ ಆಪ್ : ಅಂಚೆ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಪಡೆಯುವ ಉದ್ದೇಶದಿಂದ ಭಾರತೀಯ ಅಂಚೆ ಇಲಾಖೆ ‘ಡಾಕ್ ಸೇವಾ ಆಪ್’ ಅನ್ನು ಬಿಡುಗಡೆ ಮಾಡಿದ್ದು, ಈ ಆಪ್ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾö್ಯಕಿಂಗ್, ದೂರು ನೋಂದಣಿ, ಸೇವಾ ಮಾಹಿತಿ ಸೇರಿದಂತೆ ವಿವಿಧ ಗ್ರಾಹಕ ಸೇವೆಗಳು ಮೊಬೈಲ್‌ನಲ್ಲಿಯೇ ಪರಿಶೀಲಿಸಿಕೊಳ್ಳಲು ಲಭ್ಯವಿರುತ್ತದೆ. ಆಪ್ ಡೌನ್‌ಲೋಡ್ ಮಾಡಲು ಇಂಡಿಯಾ ಪೋಸ್ಟ್ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಸಾರ್ವðಜನಿಕರು ಮೇಲ್ಕಂಡ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು








